Breaking News

ರಾಜಸ್ಥಾನದಿಂದ ಬಂದಿದ್ದು ಮೇಕೆ ಮಾಂಸ, ನಾಯಿ ಮಾಂಸ ಅಲ್ಲ; ಪರಂ

Spread the love

ದಾವಣಗೆರೆ: ರಾಜಸ್ಥಾನದಿಂದ ಬೆಂಗಳೂರಿಗೆ ರೈಲಿನ ಮೂಲಕ ಬಂದಿದ್ದು ನಾಯಿ ಮಾಂಸ ಅಲ್ಲ. ಅದು ಮೇಕೆ ಮಾಂಸವಾಗಿದೆ ಎಂದು ಗೃಹ ಸಚಿವ ಡಾ|ಜಿ.ಪರಮೇಶ್ವರ್‌ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ನಾಯಿ ಮಾಂಸ ತಂದು ಮೇಕೆ ಮಾಂಸ ಎಂದು ಮಾರಾಟ ಮಾಡಲಾಗುತ್ತಿದೆ ಎಂದು ಇತ್ತೀಚೆಗೆ ಹಿಂದೂ ಸಂಘಟನೆಗಳ ಕಾರ್ಯಕರ್ತರು ಅನುಮಾನ ವ್ಯಕ್ತಪಡಿಸಿ ರೈಲು ನಿಲ್ದಾಣದಲ್ಲಿ ಗಲಾಟೆ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಸಚಿವರು, ಈ ಸಂಬಂಧ ಪ್ರಯೋಗಾಲಯದ ವರದಿ ಬಂದಿದ್ದು, ವರದಿ ಅನ್ವಯ ಅದು ಮೇಕೆ ಮಾಂಸ ಎಂಬುದು ದೃಢಪಟ್ಟಿದೆ ಎಂದು ಹೇಳಿದ್ದಾರೆ.

 

ನಗರದಲ್ಲಿ ಭಾನುವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ರಾಜಸ್ಥಾನದಿಂದ ಪ್ರತಿ ವಾರ ಅಥವಾ 15 ದಿನಗಳಿಗೊಮ್ಮೆ ಮಾಂಸ ತಂದು ಬೆಂಗಳೂರಿನಲ್ಲಿ ಮಾರಾಟ ಮಾಡುವುದು ಅವರ ವೃತ್ತಿ. ಆದರೆ ಕೆಲವರು ಅನಾವಶ್ಯಕವಾಗಿ ನಾಯಿ ಮಾಂಸ ಎಂದು ಆಪಾದನೆ ಮಾಡಿದ್ದರು. ಈಗ ಪ್ರಯೋಗಾಲಯ ನೀಡಿದ ವರದಿಯ ಅನ್ವಯ ಅದು ಮೇಕೆ ಮಾಂಸ ಎಂಬುದು ಬಹಿರಂಗಗೊಂಡಿದೆ. ಅನವಶ್ಯಕವಾಗಿ ದುರುದ್ದೇಶದಿಂದ ಈ ರೀತಿ ಆರೋಪ ಮಾಡುವುದು ಸರಿಯಲ್ಲ ಎಂದು ಹೇಳಿದರು.

ಮಾಂಸ ವರ್ತಕರಿಗೆ ನೋಟಿಸ್‌ ಕೊಡಲು ಖಾಕಿ ಸಿದ್ಧತೆ:

ಬೆಂಗಳೂರು: ರಾಜಸ್ಥಾನದಿಂದ ರೈಲಿನಲ್ಲಿ ನಗರಕ್ಕೆ ಮಾಂಸ ಸಾಗಣೆ ಪ್ರಕರಣ ಸಂಬಂಧ ರಾಜಸ್ಥಾನ ಮತ್ತು ನಗರದ ಮಾಂಸ ವ್ಯಾಪಾರಿಗಳಿಗೆ ನೋಟಿಸ್‌ ನೀಡಲು ಕಾಟನ್‌ ಪೇಟೆ ಠಾಣೆ ಪೊಲೀಸರು ಸಿದ್ಧತೆ ನಡೆಸಿದ್ದಾರೆ.

ಈ ಸಂಬಂಧ ರಾಜಸ್ಥಾನದಿಂದ ನಗರಕ್ಕೆ ರೈಲಿನಲ್ಲಿ ಮಾಂಸ ಪಾರ್ಸೆಲ್‌ ಕಳುಹಿಸಿದವರು ಹಾಗೂ ಆ ಮಾಂಸವನ್ನು ನಗರಕ್ಕೆ ತರಿಸಿಕೊಂಡಿರುವ ಮಾಂಸದ ವ್ಯಾಪಾರಿಗಳ ಬಗ್ಗೆ ರೈಲ್ವೆ ಇಲಾಖೆಯಿಂದ ಮಾಹಿತಿ ನೀಡುವಂತೆ ಪೊಲೀಸರು ಮನವಿ ಮಾಡಿದ್ದಾರೆ. ರೈಲ್ವೆ ಇಲಾಖೆಯಿಂದ ಸೋಮವಾರ ಆ ವ್ಯಕ್ತಿಗಳ ಮಾಹಿತಿ ಲಭ್ಯವಾಗಲಿದ್ದು, ಬಳಿಕ ಪೊಲೀಸರು ನೋಟಿಸ್‌ ಜಾರಿಗೊಳಿಸಿ ವಿಚಾರಣೆ ನಡೆಸಲಿದ್ದಾರೆ. ನಾಯಿ ಮಾಂಸವೋ ಅಥವಾ ಮೇಕೆ ಮಾಂಸವೋ ಎಂಬುದನ್ನು ಖಚಿತಪಡಿಸಿಕೊಳ್ಳುವ ಉದ್ದೇಶದಿಂದ ನೋಟಿಸ್‌ ಜಾರಿಗೆ ಸಿದ್ಧತೆ ನಡೆಸುತ್ತಿದ್ದಾರೆ.


Spread the love

About Laxminews 24x7

Check Also

5 ಹುಲಿಗಳು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಅರಣ್ಯಾಧಿಕಾರಿಗಳಿಗೆ ಕಡ್ಡಾಯ ರಜೆ ನೀಡಿ ಪಿಸಿಸಿಎಫ್ ಆದೇಶಿಸಿದ್ದಾರೆ.

Spread the loveಚಾಮರಾಜನಗರ: ಮಲೆಮಹದೇಶ್ವರ ವನ್ಯಜೀವಿಧಾಮದ ಮೀಣ್ಯಂ ಅರಣ್ಯದಲ್ಲಿ 5 ಹುಲಿಗಳು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಅರಣ್ಯಾಧಿಕಾರಿಗಳಿಗೆ ಕಡ್ಡಾಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ