ಮಂಡ್ಯ: ಶ್ರೀರಂಗಪಟ್ಟಣ ತಾಲ್ಲೂಕಿನ ಕೃಷ್ಣರಾಜಸಾಗರ (ಕೆಆರ್‌ಎಸ್) ಅಣೆಕಟ್ಟೆ ಭರ್ತಿಯಾದ ಸಂದರ್ಭದಲ್ಲಿ ಬಾಗಿನ ಅರ್ಪಿಸುವ ಸಂಪ್ರದಾಯ ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು ಅವರ ಕಾಲದಿಂದ ನಡೆದುಕೊಂಡು ಬಂದಿದೆ. ಆಷಾಢ ಮಾಸದಲ್ಲಿ ಜರುಗುತ್ತಿರುವುದು ಇದೇ ಮೊದಲು.

ಶ್ರಾವಣ ಅಥವಾ ಭಾದ್ರಪದ ಮಾಸದಲ್ಲಿ ಜಲಾಶಯ ಭರ್ತಿಯಾಗುತ್ತಿತ್ತು. ಈ ಹಿಂದೆ ಸಾಮಾನ್ಯವಾಗಿ ವರಮಹಾಲಕ್ಷ್ಮಿ ಹಬ್ಬ ಸಮೀಪವಿದ್ದಾಗ ಬಾಗಿನ ಅರ್ಪಣೆ ನಡೆಯುತ್ತಿತ್ತು.
ಈ ಬಾರಿ ಅಣೆಕಟ್ಟೆ ಮುಂಚಿತವಾಗಿ ಭರ್ತಿಯಾಗಿದೆ. 1989ರಿಂದ, ಅಂದರೆ 35 ವರ್ಷಗಳಿಂದ ಜ್ಯೋತಿಷಿ ಭಾನುಪ್ರಕಾಶ್ ಶರ್ಮಾ ಅವರೇ ಪೂಜಾ ಕಾರ್ಯಕ್ರಮ ನಡೆಸಿಕೊಂಡು ಬಂದಿದ್ದಾರೆ.
ಜುಲೈ 29ರಂದು ಬೆಳಿಗ್ಗೆ 11ಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಜಲಸಂಪನ್ಮೂಲ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಬಾಗಿನ ಸಮರ್ಪಿಸಲಿದ್ದಾರೆ. ಮಧ್ಯಾಹ್ನ 3ಕ್ಕೆ ಮೈಸೂರು ಜಿಲ್ಲೆ ಎಚ್.ಡಿ. ಕೋಟೆ ತಾಲ್ಲೂಕಿನ ಬೀಚನಹಳ್ಳಿಯ ಕಬಿನಿ ಜಲಾಶಯಕ್ಕೆ ಬಾಗಿನ ಸಮರ್ಪಣೆ ಮಾಡಲಿದ್ದಾರೆ.
Laxmi News 24×7