ಬೆಂಗಳೂರು : ಪತಿಯ ಅಕ್ರಮ ಸಂಬಂಧಕ್ಕೆ ಬೇಸತ್ತು ವಿಡಿಯೋ ಮಾಡಿ ಪತ್ನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಆಂಧ್ರಂಹಳ್ಳಿಯಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡವರನ್ನು ಮಾನಸ (25) ಎಂದು ಗುರುತಿಸಲಾಗಿದೆ. ಗಂಡನ ಮನೆಯಲ್ಲೇ ಆಕೆ ಮೊಬೈಲ್ ನಲ್ಲಿ ವಿಡಿಯೋ ಮಾಡಿ ನಂತರ ಫ್ಯಾನ್ ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕಳೆದ 6 ವರ್ಷದ ಹಿಂದೆ ದಿಲೀಪ್ ಜೊತೆ ಮಾನಸ ಮದುವೆಯಾಗಿದ್ದರು. 1 ವರ್ಷದಿಂದ ದಿಲೀಪ್ ಅನ್ಯ ಮಹಿಳೆ ಜೊತೆ ಸಂಪರ್ಕ ಇಟ್ಟುಕೊಂಡಿದ್ದರು ಎನ್ನಲಾಗಿದೆ. ಈ ವಿಚಾರಕ್ಕೆ ಪತಿ ಹಾಗೂ ಪತ್ನಿ ನಡುವೆ ಜಗಳ ನಡೆಯುತ್ತಿತ್ತು. ಇದರಿಂದ ಮನನೊಂದ ಪತ್ನಿ ಮಾನಸ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಪೋಷಕರು ಆರೋಪಿಸಿದ್ದಾರೆ.
Laxmi News 24×7