Breaking News
Home / Uncategorized / ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನ ಸಾಧನೆಯ ಬಗ್ಗೆ ಡಿಸಿಎಂ ಡಾ.ಅಶ್ವಥ್ ನಾರಾಯಣ್ ಮೆಚ್ಚುಗೆ

ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನ ಸಾಧನೆಯ ಬಗ್ಗೆ ಡಿಸಿಎಂ ಡಾ.ಅಶ್ವಥ್ ನಾರಾಯಣ್ ಮೆಚ್ಚುಗೆ

Spread the love

ಬೆಳಗಾವಿ: ಕೋವಿಡ್-19 ಸಂದರ್ಭದಲ್ಲಿಯೂ ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಶೇ.100ಕ್ಕೆ ನೂರರಷ್ಟು ಪ್ರವೇಶ ಮತ್ತು ಹಲವು ವರ್ಷಗಳಿಂದ ಉತ್ತಮ ಫಲಿತಾಂಶ ಗಳಿಸುತ್ತಿರುವ ಇಲ್ಲಿನ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನ ಸಾಧನೆಯ ಬಗ್ಗೆ ಡಿಸಿಎಂ ಡಾ.ಅಶ್ವಥ್ ನಾರಾಯಣ್ ಮೆಚ್ಚುಗೆ ವ್ಯಕ್ತಪಡಿಸಿದರು.

ನಗರದ ಕಿತ್ತೂರು ಚೆನ್ನಮ್ಮ ವೃತ್ತದಲ್ಲಿರುವ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿಗೆ ಮಂಗಳವಾರ ಭೇಟಿ ನೀಡಿದ ಅವರು, ಕಾಲೇಜಿನ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿ ಜತೆ ಚರ್ಚೆ ನಡೆಸಿದರು.

ಪ್ರತಿವರ್ಷ ಅತ್ಯುತ್ತಮ ಫಲಿತಾಂಶಗಳಿಸುತ್ತಿರುವ ಈ ಸಂಸ್ಥೆಯು ವಿದ್ಯಾರ್ಥಿಗಳಿಗೆ ಉದ್ಯೋಗಾವಕಾಶ(ಪ್ಲೇಸಮೆಂಟ್) ಕಲ್ಪಿಸುವಲ್ಲಿಯೂ ಉತ್ತಮ ಸಾಧನೆಗೈದಿದೆ ಎಂದು ಸಂತಸ ವ್ಯಕ್ತಪಡಿಸಿದರು.

ಕಟ್ಟಡ ನವೀಕರಣ-ಪ್ರಸ್ತಾವ ಸಲ್ಲಿಕೆಗೆ ಸೂಚನೆ:
ಬೆಳಗಾವಿಯಲ್ಲಿ ನಿರಂತರ ಮಳೆ ಹಾಗೂ ತಂಪು ವಾತಾವರಣದಿಂದ ಕಳೆಗುಂದಿರುವ ಕಾಲೇಜು ಕಟ್ಟಡ ನವೀಕರಣ ಹಾಗೂ ಕ್ಯಾಂಟೀನ್ ನಿರ್ಮಾಣದ ಅಗತ್ಯವಿದೆ. ಇದಕ್ಕೆ ಸಂಬಂಧಿಸಿದಂತೆ ಈಗಾಗಲೇ ಪ್ರಸ್ತಾವ ಸಲ್ಲಿಸಿದೆ ಎಂದು ಐಟಿಐ ಪ್ರಾಚಾರ್ಯ ವೈ.ಎನ್.ದೊಡ್ಡಮನಿ ಸಚಿವರ ಗಮನಕ್ಕೆ ತಂದರು.
ಇದಕ್ಕೆ ಸಕಾರಾತ್ಮಕವಾಗಿ ಪ್ರತಿಕ್ರಿಯಿಸಿದ ಸಚಿವ ಡಾ.ಅಶ್ವಥ್ ನಾರಾಯಣ ಅವರು, ಸ್ಥಳೀಯ ಶಾಸಕ ಅನಿಲ್ ಬೆನಕೆ ಅವರ ಜತೆ ಸಮಗ್ರವಾಗಿ ಚರ್ಚಿಸಿದ ಬಳಿಕ ನವೀಕರಣಕ್ಕೆ ಪ್ರಸ್ತಾವ ಕಳಿಸುವಂತೆ ಸೂಚನೆ ನೀಡಿದರು.
ಇದಾದ ಬಳಿಕ ಮಹಿಳಾ ಸರಕಾರಿ ಪದವಿ ಕಾಲೇಜಿಗೆ ಸಚಿವರು ಭೇಟಿ ನೀಡಿ ಪರಿಶೀಲಿಸಿದರು.

ಶಾಸಕ ಅನಿಲ್ ಬೆನಕೆ, ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ, ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಕುಲಸಚಿವ ಪೆÇ್ರ.ಬಸವರಾಜ ಪದ್ಮಶಾಲಿ, ಐಟಿಐ ಪ್ರಾಚಾರ್ಯ ವೈ.ಎನ್.ದೊಡ್ಡಮನಿ, ಉಭಯ ಕಾಲೇಜುಗಳ ಬೋಧಕ-ಬೋಧಕೇತರ ಸಿಬ್ಬಂದಿ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.


Spread the love

About Laxminews 24x7

Check Also

ಯಾವುದೇ ಕಾರಣಕ್ಕೂ ನಮ್ಮ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಲ್ಲ ; ಸಿಎಂ

Spread the love ಬೆಂಗಳೂರು : ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಲ್ಲ ಎಂದು ಸಿಎಂ ಸಿದ್ದರಾಮಯ್ಯ ಮತ್ತೊಮ್ಮೆ ಸ್ಪಷ್ಟನೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ