Breaking News

ಕಾಂಗ್ರೆಸ್ ಹಗರಣ, ಭ್ರಷ್ಟಾಚಾರಗಳ ವಿರುದ್ಧ ಚಕ್ರವ್ಯೂಹ ರಚನೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿಕೆ

Spread the love

ವದೆಹಲಿ: ಇಡೀ ದೇಶ ಚಕ್ರವ್ಯೂಹದಲ್ಲಿ ಸಿಲುಕಿದೆ. ದೇಶವನ್ನು ಪ್ರಧಾನಿ ಮೋದಿ, ಅಮಿತ್ ಶಾ, ಮೋಹನ್ ಭಾಗವತ್, ಅಜಿತ್ ದೋವೆಲ್, ಅಂಬಾನಿ, ಅದಾನಿ ಈ ಆರು ಜನರ ಚಕ್ರವ್ಯೂಹದಲ್ಲಿ ಸಿಲುಕಿಸಲಾಗಿದೆ ಎಂಬ ರಾಹುಲ್ ಗಾಂಧಿ ಅವರ ಹೇಳಿಕೆಗೆ ತಿರುಗೇಟು ನೀಡಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಚಕ್ರವ್ಯೂಹ ರಚಿಸಲಾಗುತ್ತಿದೆ.

 

ಆದರೆ ಅದು ಕಾಂಗ್ರೆಸ್ ನವರ ಹಗರಣ, ಭ್ರಷ್ಟಾಚಾರಗಳ ವಿರುದ್ಧ ಎಂದು ಹೇಳಿದ್ದಾರೆ.

ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರಹ್ಲಾದ್ ಜೋಶಿ, ಕಾಂಗ್ರೆಸ್ ಹಗರಣಗಳು ಹಾಗೂ ಭ್ರಷ್ಟಾಚರಗಳ ವಿರುದ್ಧ ಚಕ್ರವ್ಯೂಹ ರಚಿಸಲಾಗಿದೆ ಎಂದು ಹೇಳಿದರು.

ರಾಹುಲ್ ಗಾಂಧಿ, ಕಾಂಗ್ರೆಸ್ ನ 60 ವರ್ಷಗಳ ಭ್ರಷ್ಟಾಚಾರ , ಹಗರಣಗಳನ್ನು ಮುಚ್ಚಿ ಹಾಕಲು ಬಿಜೆಪಿ ವಿರುದ್ಧ ಆರೋಪಿಸುತ್ತಿದ್ದಾರೆ. ರಾಹುಲ್ ಗಾಂಧಿ ಹಾಗೂ ಅವರ ತಾಯಿ ರಿಮೋಟ್ ಕಂಟ್ರೋಲ್ ಮೂಲಕ ತಮ್ಮ ಸರ್ಕಾರವನ್ನೇ ಒಡೆದರು. ಈಗ ಯಾಕೆ ನಾಟಕವಾಡುತ್ತಿದ್ದಾರೆ? ತಮ್ಮ ಅವಧಿಯಲ್ಲಿ ನಡೆದ ಹಗರಣ ಮುಚ್ಚಿ ಹಾಕಲು ಈಗ ಹೇಳಿಕೆಗಳನ್ನು ಕೊಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.


Spread the love

About Laxminews 24x7

Check Also

ಡಿಕೆಶಿ-ಸಿದ್ದರಾಮಯ್ಯ ಬಣಗಳ ಮುಖಂಡರ ನಡುವೆ ಪರಸ್ಪರ ವಾಕ್ಸಮರ

Spread the loveತುಮಕೂರು: ಜಿಲ್ಲೆಯ ಕಾಂಗ್ರೆಸ್ ಪಕ್ಷದಲ್ಲಿ ಡಿಕೆಶಿ ಬಣ vs ಸಿದ್ದರಾಮಯ್ಯ ಬಣಗಳ ನಡುವಿನ ಜಟಾಪಟಿ ಜೋರಾಗಿದ್ದು, ಭಾರೀ ಚರ್ಚೆಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ