ಬೆಂಗಳೂರು, ಜುಲೈ 31: ಒಂದು ಬಾರಿ ಪರಿಹಾರ (ಓಟಿಎಸ್) ಯೋಜನೆಯನ್ನು ಬಿಬಿಎಂಪಿ ಜಾರಿಗೆ ತಂದು ಬೆಂಗಳೂರಿನ ಆಸ್ತಿ ಮಾಲೀಕರುಗಳಿಗೆ ಅನುಕೂಲ ಮಾಡಿಕೊಟ್ಟಿದ್ದು ಸ್ವಾಗತಾರ್ಹ. ತೆರಿಗೆ ಬಾಕಿ ಬರುವುದಿದೆ, ಹೀಗಾಗಿ ಇನ್ನು ಎರಡು ವಾರಗಳ ಕಾಲ ಈ ಯೋಜನೆಯನ್ನು ವಿಸ್ತರಣೆ ಮಾಡುವಂತೆ ಎಎಪಿ ರಾಜ್ಯಾಧ್ಯಕ್ಷರಾದ ಮುಖ್ಯಮಂತ್ರಿ ಚಂದ್ರು ಅವರು ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

ಸರ್ಕಾರದ ಒಂದು ಬಾರಿ ಪರಿಹಾರ (ಓಟಿಎಸ್) ಯೋಜನೆಯಿಂದಾಗಿ ಈಗಾಗಲೇ ಬೆಂಗಳೂರಿನ ಆಸ್ತಿ ಮಾಲೀಕರು ಪ್ರಯೋಜನವನ್ನು ಪಡೆದುಕೊಂಡು ತಮ್ಮ ಬಾಕಿ ಉಳಿಸಿಕೊಂಡಿದ್ದ ಆಸ್ತಿ ತೆರಿಗೆಯನ್ನು ಕಟ್ಟುತ್ತಿದ್ದಾರೆ. ಆದರೆ 2.87 ಲಕ್ಷ ಆಸ್ತಿಗಳಿಂದ 831 ಕೋಟಿ.ಗು ಹೆಚ್ಚು ತೆರಿಗೆ ಸಂಗ್ರಹಣೆ ಆಗಬೇಕಿದೆ.
ಈ ಕುರಿತು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಈಗಾಗಲೇ ಬಿಬಿಎಂಪಿ ತಿಳಿಸಿದೆ. ಇದರಲ್ಲಿ ಕೆಲವೊಂದು ಆಸ್ತಿ ಮಾಲೀಕರುಗಳಿಗೆ ವಲಯ ಘೋಷಣೆ ಹಾಗೂ ಬಿಬಿಎಂಪಿಯಿಂದ ಪುನರ್ ನಿಗದಿಪಡಿಸಿದ್ದ ಬೇಡಿಕೆ ಮೊತ್ತದ ವಿಷಯದಲ್ಲಿ ಸಾಕಷ್ಟು ಗೊಂದಲಗಳಿರುವ ಕಾರಣದಿಂದಾಗಿ ತಮ್ಮ ಆಸ್ತಿ ತೆರಿಗೆ ಪಾವತಿಸಲು ಸಾಧ್ಯವಾಗಿಲ್ಲ ಎಂದರು.
Laxmi News 24×7