Breaking News

ಪೊಲೀಸರ ಕೈಯಿಂದ ತಪ್ಪಿಸಲೆತ್ನಿಸಿದ ರೌಡಿಶೀಟರ್ ಗೆ ಗುಂಡೇಟು

Spread the love

ದಗ: ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿ ಆಗಲೆತ್ನಿಸಿದ ರೌಡಿಶೀಟರ್ ಗೆ ಗುಂಡಿನ ರುಚಿ ತೋರಿಸಿದ್ದಾರೆ. ಗದಗ ಜಿಲ್ಲೆಯ ಲಕ್ಕುಂಡಿ ಕಣಗಿನಹಾಳ ರಸ್ತೆಯಲ್ಲಿ ಗುರುವಾರ (ಆ.1) ಘಟನೆ ನಡೆದಿದೆ.

ರೌಡಿ ಶೀಟರ್ ಸಂಜಯ್ ಕೊಪ್ಪದ ಮೇಲೆ ಫೈರಿಂಗ್ ನಡೆಸಲಾಗಿದೆ. ರಾಬರಿ‌ ಕೇಸ್ ಗೆ ಸಂಬಂಧಿಸಿದಂತೆ ಸ್ಥಳ ಮಹಜರಿಗೆ ಪೊಲೀಸರು ಬಂದಿದ್ದರು.

 

ಸ್ಥಳ ಮಹಜರು ವೇಳೆ ರೌಡಿ ಶೀಟರ್ ಸಂಜಯ್ ಪೊಲೀಸರ ಮೇಲೆ ಕಲ್ಲೆಸೆದು ಪರಾರಿಯಾಗಲು ಯತ್ನಿಸಿದ್ದಾನೆ. ಓಡಲು ಮುಂದಾಗಿದ್ದ ರೌಡಿ ಶೀಟರ್ ಸಂಜಯ್ ಕೊಪ್ಪದ ಮೇಲೆ ಪಿಎಸ್ ಐ ಸಂಗಮೇಶ್ ಶಿವಯೋಗಿ ಫೈರಿಂಗ್ ನಡೆಸಿದ್ದಾರೆ.

ಘಟನೆಯಲ್ಲಿ ಪೊಲೀಸ್ ಸಿಬ್ಬಂದಿ ಪ್ರಕಾಶ್ ಗಾಣಿಗೇರ್ ಗೆ ಕೈ, ಕಾಲಿಗೆ ಗಾಯವಾಗಿದೆ.

ಸಂಜಯ್ ವಿರುದ್ಧ ರಾಬರಿ, ಕೊಲೆಯತ್ನಕ್ಕೆ ಸಂಬಂಧಿಸಿದಂತೆ 12 ಕೇಸ್ ದಾಖಲಾಗಿದೆ. ಗಾಯಗೊಂಡ ಆರೋಪಿ ಸಂಜಯ್ ಕೊಪ್ಪದ್, ಪಿಸಿ ಪ್ರಕಾಶ್ ಗೆ ಜಿಮ್ಸ್ ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.


Spread the love

About Laxminews 24x7

Check Also

ಲಂಚ ಸ್ವೀಕರಿಸುತ್ತಿದ್ದ ಶಿರಸ್ತೇದಾರ ಸೇರಿ ಮೂವರು ಸಿಬ್ಬಂದಿ ಲೋಕಾಯುಕ್ತ ಬಲೆಗೆ

Spread the loveಹಾವೇರಿ : ಆರ್​​ಟಿಸಿ ದುರಸ್ತಿ ಮಾಡಿಕೊಡಲು 12 ಸಾವಿರ ರೂಪಾಯಿ ಲಂಚ ಸ್ವೀಕರಿಸುತ್ತಿದ್ದ ಶಿರಸ್ತೇದಾರ ಸೇರಿ ಮೂವರು ಸಿಬ್ಬಂದಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ