ಮಹಾಲಿಂಗಪುರ: ಘಟಪ್ರಭಾ ನದಿ ಪ್ರವಾಹದಿಂದ ನಡುಗಡ್ಡೆಯಾಗಿರುವ ಹಳೆ ನಂದಗಾಂವ ಗ್ರಾಮದ 52 ಕುಟುಂಬಗಳ ಶಾಶ್ವತ ಸ್ಥಳಾಂತರದ ಬೇಡಿಕೆ ಮರೀಚಿಕೆಯಾಗಿದ್ದು, ಮನೆಗಳ ಹಂಚಿಕೆ ಗೊಂದಲಮಯವಾಗಿ ಪರಿಣಮಿಸಿದೆ.
ಗ್ರಾಮಸ್ಥರ ಶಾಶ್ವತ ಸ್ಥಳಾಂತರಕ್ಕಾಗಿ 1982ರಲ್ಲಿಯೇ ಹಕ್ಕು ಪತ್ರ ಹಾಗೂ 10 ಎಕರೆ ಭೂಮಿ ನೀಡಲಾಗಿದೆ.
ಪ್ರತಿ ಮನೆಯ ಕುಟುಂಬ ಸದಸ್ಯರ ಸಂಖ್ಯೆಗೆ ಅನುಗುಣವಾಗಿ ಜಾಗೆ ಅಳತೆ ಮಾಡಲಾಗಿದೆ. ಅಲ್ಲದೆ ಗ್ರಾಮ ಪಂಚಾಯ್ತಿ ಪ್ರತಿ ವರ್ಷ ಇದಕ್ಕಾಗಿ ಭೂಬಾಡಿಗೆಯನ್ನು ಕೆಲ ಗ್ರಾಮಸ್ಥರಿಂದ ಪಡೆಯುತ್ತಿದೆ. ಸ್ಥಳಾಂತರಕ್ಕಾಗಿ ಹಕ್ಕು ಪತ್ರ ನೀಡಲಾಗಿದ್ದರೂ ಮನೆ ಯಾರಿಗೆ ಸೇರಬೇಕು ಎಂದು ಇಲ್ಲಿಯವರೆಗೂ ನಮೂದಿಸಿಲ್ಲ ಎಂಬ ವಿಚಾರ ಗ್ರಾಮಸ್ಥರಿಗೆ ಗೊಂದಲಕರವಾಗಿದೆ.