Breaking News

ಕಾಂಗ್ರೆಸ್ ಹಿರಿಯ ನಾಯಕ ಅಹ್ಮದ್ ಪಟೇಲ್ ಇನ್ನಿಲ್ಲ

Spread the love

ನವದೆಹಲಿ: ರಾಜ್ಯ ಸಭಾ ಸದಸ್ಯ, ಕಾಂಗ್ರೆಸ್‍ನ ಹಿರಿಯ ನಾಯಕ ಅಹ್ಮದ್ ಪಟೇಲ್(71) ಇಂದು ವಿಧಿವಶರಾಗಿದ್ದಾರೆ.

ಅಹ್ಮದ್ ಪಟೇಲ್ ಅವರಿಗೆ ಕೆಲ ವಾರಗಳ ಹಿಂದಷ್ಟೇ ಕೊರೊನಾ ಸೋಂಕು ತಗುಲಿತ್ತು. ಗುರುಗ್ರಾಮದ ಮೆಡಂತಾ ಆಸ್ಪತ್ರೆಗೆ ದಾಖಲಾಗಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇದಕ್ಕೂ ಮುನ್ನ ಫರಿದಾಬಾದ್‍ನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಅವರ ಆರೋಗ್ಯ ಸ್ಥಿತಿ ತೀರಾ ಹದಗೆಟ್ಟಿತ್ತು. ಹೀಗಾಗಿ ಮೆಡಂತಾ ಆಸ್ಪತ್ರೆಯಲ್ಲಿ ಇಂದು ಕೊನೆಯುಸಿರೆಳೆದಿದ್ದಾರೆ.

ತಮಗೆ ಕೊರೊನಾ ಸೋಂಕು ತಗುಲಿದ ಕುರಿತು ಅಕ್ಟೋಬರ್ 1ರಂದು ಸ್ವತಃ ಅಹ್ಮದ್ ಪಟೇಲ್ ಅವರೇ ಖಚಿತಪಡಿಸಿದ್ದರು. ಅಲ್ಲದೆ ಹೋಮ್ ಐಸೋಲೇಟ್ ಆಗುತ್ತಿರುವುದಾಗಿ ಮಾಹಿತಿ ನೀಡಿದ್ದರು. ಬಳಿಕ ಆರೋಗ್ಯದಲ್ಲಿ ಚೇತರಿಕೆ ಕಾಣದ ಹಿನ್ನೆಲೆ ಫರಿದಾಬಾದ್ ಆಸ್ಪತ್ರೆಗೆ ದಾಖಲಾಗಿದ್ದರು. ಆದರೂ ಆರೋಗ್ಯದಲ್ಲಿ ಚೇತರಿಕೆ ಕಾಣದ ಹಿನ್ನೆಲೆ ಮೆಡಂತಾ ಆಸ್ಪತ್ರೆಗೆ ದಾಖಲಾಗಿದ್ದರು.

71 ವರ್ಷದ ಅಹ್ಮದ್ ಪಟೇಲ್ ಅವರು ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ಕಾಂಗ್ರೆಸ್ ಖಜಾಂಚಿಯಾಗಿದ್ದ ಅವರು , ಕಾಂಗ್ರೆಸ್‍ನ ಹಿರಿಯ ನಾಯಕರು ಮತ್ತು ಸೋನಿಯಾ ಗಾಂಧಿ ಕುಟುಂಬದ ಆಪ್ತರು. ಆಸ್ಪತ್ರೆಗೆ ದಾಖಲಾದಾಗ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಹಾಗೂ ಸಂಸದ ಶಶಿ ತರೂರ್ ಟ್ವೀಟ್ ಮಾಡಿ ಬೇಗ ಗುಣಮುಖರಾಗುವಂತೆ ಪ್ರಾರ್ಥಿಸಿದ್ದರು.


Spread the love

About Laxminews 24x7

Check Also

ಶಿವಾಜಿ ಮಹಾರಾಜರು ದಾರ್ಶನಿಕ ನಾಯಕ : ಪ್ರಧಾನಿ ಮೋದಿ

Spread the loveನವದೆಹಲಿ: ಛತ್ರಪತಿ ಶಿವಾಜಿ ಮಹಾರಾಜರು ದಾರ್ಶನಿಕ ನಾಯಕ, ಅಸಾಧಾರಣ ಆಡಳಿತಗಾರ ಮತ್ತು ಕಾರ್ಯತಂತ್ರದ ಚಿಂತಕ,ಅವರ ಧೈರ್ಯ ಮತ್ತು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ