ಮುಂಬೈ: ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಶೂಟಿಂಗ್ ವಿಭಾಗದಲ್ಲಿ ಕಂಚಿನ ಪದಕ ಗೆದ್ದ ಸ್ವಪ್ನಿಲ್ ಕುಸಳೆ ಅವರಿಗೆ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂದೆ ₹1 ಕೋಟಿ ಬಹುಮಾನ ಘೋಷಣೆ ಮಾಡಿದ್ದಾರೆ.
ಕುಸಳೆ ಅವರು 50 ಮೀಟರ್ ಶೂಟಿಂಗ್ ವಿಭಾಗದಲ್ಲಿ ಮೂರನೇ ಸ್ಥಾನ ಪಡೆಯುವ ಮೂಲಕ ಕಂಚಿನ ಪದಕ ಗೆದ್ದಿದ್ದಾರೆ.
ಈ ಮೂಲಕ ಈ ಬಾರಿಯ ಒಲಿಂಪಿಕ್ಸ್‌ನಲ್ಲಿ ಭಾರತಕ್ಕೆ ಮೂರು ಪದಕಗಳು ಒಲಿದಂತಾಗಿದೆ.
ಕುಸಳೆ ಅವರ ತಂದೆ ಮತ್ತು ತರಬೇತುದಾರರೊಂದಿಗೆ ಸಿಎಂ ಮಾತುಕತೆ ನಡೆಸಿದ್ದಾರೆ, ಜತೆಗೆ ಕುಸಳೆ ಅವರಿಗೆ ವಿಡಿಯೊ ಕಾಲ್ ಮಾಡಿ ಅಭಿನಂದಿಸಿದ್ದಾರೆ. ‘ಈ ವೇಳೆ ಮಾತನಾಡಿದ ಅವರು, ಕುಸಳೆ ಅವರಿಗೆ ₹1 ಕೋಟಿ ಬಹುಮಾನ ಘೋಷಣೆ ಮಾಡಲಾಗಿದೆ. ಒಲಿಂಪಿಕ್ಸ್‌ನಿಂದ ಆಗಮಿಸಿದ ಬಳಿಕ ಅವರನ್ನು ಅಭಿನಂದಿಸಲಾಗುವುದು’ ಎಂದರು.
‘ಮಹಾರಾಷ್ಟ್ರದ ಕೊಲ್ಹಾಪುರದ ಮೂಲದ ಸ್ವಪ್ನಿಲ್ ಕುಸಳೆ ಅವರು ಕ್ರೀಡಾ ಲೋಕದಲ್ಲಿ ಸಾಧನೆ ಮಾಡಿ ದೇಶಕ್ಕೆ ಕೀರ್ತಿ ತಂದಿರುವುದು ಹೆಮ್ಮೆಯ ಸಂಗತಿ’ ಎಂದು ಹೇಳಿದರು