Breaking News

ಕರ್ನಾಟಕ ರಾಜಕಾರಣಲ್ಲಿ ಶಕುನಿ‌ ರಾಜಕೀಯ ಜಾಸ್ತಿಯಾಗುತ್ತಿದೆ: ಹೆಬ್ಬಾಳಕರ

Spread the love

ಬೆಳಗಾವಿ: ಕರ್ನಾಟಕ ರಾಜಕಾರಣಲ್ಲಿ ದಿನದಿಂದ ದಿನಕ್ಕೆ ಶಕುನಿ‌ ರಾಜಕೀಯ ಜಾಸ್ತಿಯಾಗುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಆರೋಪಿಸಿದರು.

ಸವದತ್ತಿಯಲ್ಲಿ ಮಾತನಾಡಿದ ಅವರು, ಬಿಜೆಪಿಯ ಕೆಲ ನಾಯಕರಿಗೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ನಡುವೆ ವೈಮನಸ್ಸು ತಂದಿಡುವುದೇ ಕೆಲಸವಾಗುತ್ತಿದೆ ಎಂದು ಕಿಡಿಕಾರಿದರು.

Belagavi; ಕರ್ನಾಟಕ ರಾಜಕಾರಣಲ್ಲಿ ಶಕುನಿ‌ ರಾಜಕೀಯ ಜಾಸ್ತಿಯಾಗುತ್ತಿದೆ: ಲಕ್ಷ್ಮಿ ಹೆಬ್ಬಾಳಕರ

ರಾಜ್ಯಾಧ್ಯಕ್ಷರಿಂದ ಒಳ ಒಪ್ಪಂದದ ರಾಜಕೀಯ ನಡೆಯುತ್ತಿದೆ ಎಂಬ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆಗೆ ಪ್ರತಿಕ್ರಿಯಿಸಿ, ಯತ್ನಾಳ್ ಅವರ ಬಗ್ಗೆ ಅಪಾರ ಗೌರವಿದೆ. ಅವರಿಗೆ ಇಂತಹ ಹೇಳಿಕೆಗಳು ಶೋಭೆ ತರುವುದಿಲ್ಲ. ಶಾಸಕ ಯತ್ನಾಳ್ ಅವರು, ಬೇಕಿದ್ದರೆ ತಮ್ಮ ಪಕ್ಷದ ಬಗ್ಗೆ ಮಾತಾಡಲಿ, ಇನ್ನೊಂದು ಪಕ್ಷದ ಬಗ್ಗೆ ಮಾತನಾಡುವುದು ಬೇಡ ಎಂದರು.

ಅವರಿಗೆ ಗೊಂದಲ‌ ಸೃಷ್ಟಿಸುವುದೇ ಕೆಲಸ. ಅನಾವಶ್ಯಕ ಹೇಳಿಕೆಗಳಿಂದ ಗೊಂದಲ‌ ಸೃಷ್ಟಿ ಮಾಡಿ, ಸಿಎಂ, ಡಿಸಿಎಂ ನಡುವೆ ಭಿನ್ನಮತ ತಂದಿಡುವ ಕೆಲಸವನ್ನು ಮೊದಲು ಬಿಡಲಿ ಎಂದು ಸಚಿವರು ತಿರುಗೇಟು ನೀಡಿದರು.

ನಮ್ಮ ಪಕ್ಷದಲ್ಲಿ ಮುಖ್ಯಮಂತ್ರಿ ಮಾಡುವುದು ಪಕ್ಷದ ಶಾಸಕರು ಹಾಗೂ ಹೈಕಮಾಂಡ್ ಹೊರತು ಬಿಜೆಪಿ ರಾಜ್ಯಾಧ್ಯಕ್ಷರಲ್ಲ. ಒಳ ಒಪ್ಪಂದ ರಾಜಕಾರಣದ ಮಾತನ್ನು ಇನ್ಮುಂದಾದರೂ ಯತ್ನಾಳ್ ನಿಲ್ಲಿಸಲಿ ಎಂದು ವಾಗ್ದಾಳಿ ನಡೆಸಿದರು.


Spread the love

About Laxminews 24x7

Check Also

ನಾಲ್ಕು ರಾಜ್ಯಗಳ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

Spread the loveಭಾರತೀಯ ಜನತಾ ಪಾರ್ಟಿ (ಬಿಜೆಪಿ) ಗೋವಾ ಸೇರಿದಂತೆ ನಾಲ್ಕು ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ