Breaking News

JDS ಅಸ್ತಿತ್ವವನ್ನು ಬಿಜೆಪಿ ಕಿತ್ತುಕೊಳ್ಳಲು ಹೇಗೆ ಸಾಧ್ಯ: ಡಿಸಿಎಂ ಡಿ.ಕೆ.ಶಿವಕುಮಾರ್

Spread the love

ಬೆಂಗಳೂರು: ‘ಜೆಡಿಎಸ್ ಪ್ರಾಬಲ್ಯವಿರುವ ಕ್ಷೇತ್ರಗಳಲ್ಲಿ ಅವರ ಅಸ್ತಿತ್ವವನ್ನು ಕಿತ್ತುಕೊಳ್ಳಲು ಬಿಜೆಪಿಗೆ ಹೇಗೆ ಸಾಧ್ಯ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದ್ದಾರೆ.

ಬಿಜೆಪಿ ಪಾದಯಾತ್ರೆ ವಿಚಾರದಲ್ಲಿ ಮೈತ್ರಿಯಲ್ಲಿ ಅಪಸ್ವರ ಮೂಡಿರುವ ಬಗ್ಗೆ ಗುರುವಾರ ವಿಧಾನಸೌಧದ ಆವರಣದಲ್ಲಿ ಸುದ್ದಿಗಾರರ ಪ್ರಶ್ನೆಗಳಿಗೆ ಉತ್ತರಿಸಿದ ಡಿಸಿಎಂ “ಕುಮಾರಸ್ವಾಮಿ ಆಗಲಿ, ನಾನಾಗಲಿ, ಬಿಜೆಪಿಯವರಾಗಲಿ ಎಲ್ಲರೂ ಅವರವರ ಪಕ್ಷದ ರಾಜಕಾರಣ ಮಾಡುತ್ತಾರೆ.

ಕುಮಾರಸ್ವಾಮಿ ಅವರು ತಮ್ಮ ಪಕ್ಷದ ಹಾಗೂ ತಮ್ಮ ರಾಜಕೀಯ ಅಸ್ತಿತ್ವ ಉಳಿಸಿಕೊಳ್ಳುತ್ತಾರೆ ಎಂದು ನಾನು ಭಾವಿಸಿದ್ದೇನೆ. ಈ ವಿಚಾರಕ್ಕೇ ಮೈತ್ರಿಯಲ್ಲಿ ತಿಕ್ಕಾಟ ನಡೆಯುತ್ತಿರಬಹುದು” ಎಂದರು.

“ಬಿಜೆಪಿಯವರು ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಬೆಂಬಲದೊಂದಿಗೆ ಸುಮಾರು 10 ಕ್ಷೇತ್ರಗಳನ್ನು ಗೆದ್ದಿದ್ದಾರೆ. ಮೈಸೂರು, ಮಂಡ್ಯ, ಬೆಂಗಳೂರು ಗ್ರಾಮಾಂತರ ಜೆಡಿಎಸ್ ನೆಲೆ ಇರುವ ಪ್ರದೇಶ. ಇಲ್ಲಿ ಬಿಜೆಪಿಯವರು ಜೆಡಿಎಸ್ ನವರನ್ನು ಪರಿಗಣಿಸದೇ ತಮಟೆ ಬಾರಿಸಿಕೊಂಡು ನಾಯಕತ್ವ ಅಪಹರಿಸಲು ಹೋದರೆ ಅದನ್ನು ಸಹಿಸಿಕೊಳ್ಳಲು ಜೆಡಿಎಸ್ ಗೆ ಸಾಧ್ಯವೇ? ಜೆಡಿಎಸ್ ಹಾಗೂ ಬಿಜೆಪಿ ವಿಲೀನವಾಗುವುದಾದರೆ ಈ ರೀತಿ ಮಾಡಬಹುದು” ಎಂದರು.JDS ಅಸ್ತಿತ್ವವನ್ನು ಬಿಜೆಪಿ ಕಿತ್ತುಕೊಳ್ಳಲು ಹೇಗೆ ಸಾಧ್ಯ: ಡಿಸಿಎಂ ಡಿ.ಕೆ.ಶಿವಕುಮಾರ್

ಪಾದಯಾತ್ರೆಗೆ ತಿರುಗೇಟು ನೀಡಲು ಸಿದ್ಧತೆ

ಪೆನ್ ಡ್ರೈವ್ ವಿಚಾರವಾಗಿ ನಿಮ್ಮ ಮೇಲೆ ಆರೋಪ ಮಾಡಿದ್ದ ಕುಮಾರಸ್ವಾಮಿ ಅವರು ಈಗ ಪ್ರೀತಂಗೌಡ ವಿರುದ್ಧ ಆರೋಪ ಮಾಡುತ್ತಿದ್ದಾರೆ ಎಂಬ ಪ್ರಶ್ನೆಗೆ, “ಈಗ ಆ ವಿಚಾರ ಬೇಡ, ಆಮೇಲೆ ಮಾತನಾಡೋಣ. ಈಗ ಪಾದಯಾತ್ರೆ ಬಗ್ಗೆ ಚರ್ಚೆ ಮಾಡೋಣ. ನಾವು ಅವರ ಪಾದಯಾತ್ರೆಗೆ ತಿರುಗೇಟು ನೀಡಲು ಸಿದ್ಧತೆ ಮಾಡಿಕೊಳ್ಳುತ್ತಿದ್ದು, ಬಿಜೆಪಿ ಸರಕಾರದ ಕಾಲದ 30 ಹಗರಣಗಳಿವೆ. ದಿನಾ ಒಂದೊಂದು ಹಗರಣ ಬಿಚ್ಚಿಡುತ್ತೇವೆ. ಅವರ ಪಾದಯಾತ್ರೆ ಅಂತಿಮ ರೂಪುರೇಷೆ ಬಂದರೆ ನಾವು ನಮ್ಮ ಕಾರ್ಯಸೂಚಿ ತೀರ್ಮಾನ ಮಾಡುತ್ತೇವೆ” ಎಂದರು.


Spread the love

About Laxminews 24x7

Check Also

5 ಹುಲಿಗಳು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಅರಣ್ಯಾಧಿಕಾರಿಗಳಿಗೆ ಕಡ್ಡಾಯ ರಜೆ ನೀಡಿ ಪಿಸಿಸಿಎಫ್ ಆದೇಶಿಸಿದ್ದಾರೆ.

Spread the loveಚಾಮರಾಜನಗರ: ಮಲೆಮಹದೇಶ್ವರ ವನ್ಯಜೀವಿಧಾಮದ ಮೀಣ್ಯಂ ಅರಣ್ಯದಲ್ಲಿ 5 ಹುಲಿಗಳು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಅರಣ್ಯಾಧಿಕಾರಿಗಳಿಗೆ ಕಡ್ಡಾಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ