Breaking News

ಮಾಂಸಾಹಾರಸೇವನೆ ಮಾಡಿದ್ದ ಒಂದೇ ಕುಟುಂಬದ ನಾಲ್ವರ ಸಾವು

Spread the love

ರಾಯಚೂರು: ವಿಷಾಹಾರ ಸೇವಿಸಿ ಒಂದೇ ಕುಟುಂಬದ ನಾಲ್ವರು ದುರ್ಮರಣಕ್ಕೀಡಾದ ಘಟನೆ ಸಿರವಾರ ತಾಲ್ಲೂಕಿನ ಕಲ್ಲೂರು ಗ್ರಾಮದಲ್ಲಿ ಶುಕ್ರವಾರ(ಆ.02) ನಡೆದಿದೆ.

ಗ್ರಾಮದ ನಿವಾಸಿಗಳಾದ ಭೀಮಣ್ಣ ಬಾಗ್ಲಿ (70), ಈರಮ್ಮ ಬಾಗ್ಲಿ (62), ಮಲ್ಲೇಶ (21), ಪಾರ್ವತಿ(19) ಎಂದು ಗುರುತಿಸಲಾಗಿದೆ.

ಇನ್ನೊಬ್ಬ ಯುವತಿ ಮಲ್ಲಮ್ಮ ಸ್ಥಿತಿಯೂ ಗಂಭೀರವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಬುಧವಾರ ಮನೆಯಲ್ಲಿ ಕುಟುಂದ ಎಲ್ಲ ಸದಸ್ಯರು ಮಾಂಸಾಹಾರ ಸೇವನೆ ಮಾಡಿದ್ದಾರೆ. ಆರೋಗ್ಯದ ಮೇಲೆ ಪರಿಣಾಮ ಬೀರಿದ ಹಿನ್ನೆಲೆಯಲ್ಲಿ ಸಂಬಂಧಿಗಳು ರಾಯಚೂರು ನಗರದ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಿದ್ದಾರೆ. ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.

ಈ ಬಗ್ಗೆ ಸಿರವಾರ ಪೊಲೀಸರು ತನಿಖೆ ನಡೆಸುತ್ತಿದ್ದು, ಪ್ರಕರಣ ದಾಖಲಿಸಲಾಗುತ್ತಿದೆ ಎಂದು ಪೊಲೀಸರು ತಿಳಿದಿದ್ದಾರೆ.


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ