ತೀರ್ಥಹಳ್ಳಿ : ಜೀವ ಉಳಿಸಲು ವೈದ್ಯರು ಎಷ್ಟು ಮುಖ್ಯವೋ ನಮ್ಮನ್ನು ಆಸ್ಪತ್ರೆಗೆ ಕರೆದೊಯ್ಯಲು ಇರುವ ಆಂಬುಲೆನ್ಸ್ ವಾಹನ ಕೂಡ ಅಷ್ಟೇ ಮುಖ್ಯ. ಆದರೆ ಬೆಂಗಳೂರು 108 ಸಿಬ್ಬಂದಿಗಳ ಬೇಜವಾಬ್ದಾರಿತನಕ್ಕೆ ಆಕ್ರೋಶ ವ್ಯಕ್ತವಾದ ಘಟನೆ ಗುರುವಾರ(ಆ.01) ಸಂಜೆ ನಡೆದಿದೆ.
ಪುಷ್ಯ ಮಳೆ ಅಬ್ಬರಕ್ಕೆ ತಾಲೂಕಿನಾದ್ಯಂತ ಅತೀ ಹೆಚ್ಚು ಮಳೆಯಾಗುತ್ತಿರುವುದರಿಂದ ಪ್ರವಾಹ ಬಂದ ಹಿನ್ನಲೆಯಲ್ಲಿ ಕುರುವಳ್ಳಿಯ ಜಯಚಾಮರಾಜೇಂದ್ರ ತುಂಗಾ ಸೇತುವೆ ಪಕ್ಕ ವಾಸಿಸುವ ಟೆಂಟ್ ತುಂಗಾ ಕಾಲೋನಿ ನಿವಾಸಿಗಳನ್ನು ಪಟ್ಟಣದ ಕೆ ಟಿ ಕೆ ಕಲ್ಯಾಣ ಮಂಟಪ ಕಾಳಜಿ ಕೇಂದ್ರಕ್ಕೆ ಸ್ಥಳಾಂತರಿಸಲಾಗಿದೆ.
ಈ ಕಾಳಜಿ ಕೇಂದ್ರದ ನಿರಾಶ್ರಿತರಲ್ಲಿ 9 ತಿಂಗಳು ತುಂಬಿದ ತುಂಬು ಗರ್ಭಿಣಿ ಮಹಿಳೆ ಇದ್ದು ಅವರಿಗೆ ತಿವ್ರ ತರದ ಹೊಟ್ಟೆ ನೋವು ಕಾಣಿಸಿಕೊಂಡಿದೆ. ತಕ್ಷಣ 108 ಆಂಬುಲೆನ್ಸ್ ಗೆ ಅಲ್ಲೇ ಇದ್ದ ನಿರಾಶ್ರಿತರಲ್ಲಿ ಒಬ್ಬರು ಕರೆ ಕೂಡ ಮಾಡಿದ್ದಾರೆ. ಕರೆ ಮಾಡಿ 45 ನಿಮೀಷ ವಾದರೂ ಆಂಬುಲೆನ್ಸ್ ಬಂದಿಲ್ಲ .ಮಳೆ ಇದ್ದುದರಿಂದ ರಸ್ತೆಯಲ್ಲಿ ಯಾವುದೇ ವಾಹನ ಕೂಡ ಇರಲಿಲ್ಲ ನಂತರ ಪುನಃ ಮತ್ತೆ 108 ಆಂಬುಲೆನ್ಸ್ ಗೆ ಕರೆ ಮಾಡಿದರೆ ತೀರ್ಥಹಳ್ಳಿ ಎಲ್ಲಿ ಬರುತ್ತೆ,ಕೆ.ಟಿ.ಕೆ ಎಲ್ಲಿ ಬರುತ್ತೆ… ?
ಯಾವ ಊರು ನೀವು ಹೇಳಿದಲ್ಲಿಗೆ ಬರಲು ಆಗುವುದಿಲ್ಲ ಒಂದು ಘಂಟೆ ಕಾಯಿರಿ ಎಂದು ಬೇಜವಾಬ್ದಾರಿ ಮಾತನ್ನು ಬೆಂಗಳೂರು 108
ಆಂಬುಲೆನ್ಸ್ ಸಿಬ್ಬಂದಿಗಳು ಹೇಳಿದ್ದಾರೆ. ಆಂಬುಲೆನ್ಸ್ ಬಾರದ ಕಾರಣ ಮಹಿಳೆಗೆ ಹೊಟ್ಟೆ ತುಂಬಾ ನೋವಾಗಿ ವದ್ದಾಡುತ್ತಾ ಇರುವಾಗ ಅಲ್ಲಿನ ನಿರಾಶ್ರಿತರು ಏನಾದರೂ ಅವಗಢ ಆದ ಮೇಲೆ ಅಂಬುಲೆನ್ಸ್ ನವರು ಬರ್ತಾರಾ ಎಂದು ಆಕ್ರೋಶ ವ್ಯಕ್ತಪಡಿಸಿದರು