Breaking News

ಯಾದಗಿರಿ ಪಿಎಸ್‌‍ಐ ಪರಶುರಾಮ್‌ ನಿಗೂಢ ಸಾವು,

Spread the love

ಬೆಂಗಳೂರು,ಆ.3- ಶಾಸಕರು ಹಣ ಕೇಳಿದ್ದಕ್ಕೆ ಒತ್ತಡದಿಂದಾಗಿ ಯಾದಗಿರಿ ಪಿಎಸ್‌‍ಐ ಪರಶುರಾಮ್‌ ಸಾವನ್ನಪ್ಪಿದ್ದಾರೆ ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ನಾಯಕ ಆರ್‌.ಅಶೋಕ್‌ ಗಂಭೀರ ಆರೋಪ ಮಾಡಿದ್ದಾರೆ.

ಯಾದಗಿರಿ ಪಿಎಸ್‌‍ಐ ಪರಶುರಾಮ್‌ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ಒತ್ತಡದ ಮೇಲೆಯೇ ವಾಲ್ಮೀಕಿ ನಿಗಮದ ಅಧಿಕಾರಿ ಆತಹತ್ಯೆ ಮಾಡಿಕೊಂಡಿದ್ದರು.

ಈಗ ವರ್ಗಾವಣೆಗೆ ಶಾಸಕರು ಹಣ ಕೇಳಿದ್ದಕ್ಕೆ ಪರಶುರಾಮ್‌ ಅವರ ಸಾವಾಗಿದೆ ಎಂದು ಆಕೋಶ ವ್ಯಕ್ತಪಡಿಸಿದ್ದಾರೆ.

ಈ ಸರ್ಕಾರದಲ್ಲಿ ಎಲ್ಲರೂ ಲೂಟಿಗೆ ಇಳಿದಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಅಧಿಕಾರದಲ್ಲಿ ಮುಂದುವರೆಯುವ ನೈತಿಕತೆ ಇಲ್ಲ, ರಾಜೀನಾಮೆ ಕೊಟ್ಟು ಹೋಗಲಿ ಎಂದು ಆಗ್ರಹಿಸಿದರು.

ಶಾಸಕ ಸುನಿಲ್‌ ಕುಮಾರ್‌ ಪ್ರತಿಕ್ರಿಯಿಸಿ, ಕಾಂಗ್ರೆಸ್‌‍ ಶಾಸಕರು ವರ್ಗಾವಣೆ ದಂಧೆಯಲ್ಲಿ ನೇರ ಪಾಲ್ಗೊಂಡಿದ್ದಾರೆ. ಅಲ್ಲಿನ ಶಾಸಕರು ವರ್ಗಾವಣೆಗೆ ದೊಡ್ಡ ಮೊತ್ತದ ಹಣ ಕೇಳುತ್ತಿದ್ದಾರೆ. ಪಿಎಸ್‌‍ಐ ಪರಶುರಾಮ್‌ ಸಾವಿನ ಬಗ್ಗೆ ಸಮಗ್ರ ತನಿಖೆ ನಡೆಯೇಕು ಎಂದು ಆಗ್ರಹಿಸಿದರು.


Spread the love

About Laxminews 24x7

Check Also

ನಾಲ್ಕು ರಾಜ್ಯಗಳ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

Spread the loveಭಾರತೀಯ ಜನತಾ ಪಾರ್ಟಿ (ಬಿಜೆಪಿ) ಗೋವಾ ಸೇರಿದಂತೆ ನಾಲ್ಕು ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ