Breaking News

ನೆರೆ ಸಂತ್ರಸ್ತರಿಗೆ ಶಾಶ್ವತ ಪರಿಹಾರ ನೀಡಲು ಗಡುವು. ಇಲ್ಲದಿದ್ದಲ್ಲಿ ಉಗ್ರ ಹೋರಾಟ

Spread the love

ಮುಧೋಳ: ಪ್ರತಿ ವರ್ಷ ಘಟಪ್ರಭಾ ನದಿಯ ಪ್ರವಾಹದಿಂದ ವರ್ಷದ ಗಂಜಿಯನ್ನು ಕಳೆದುಕೊಳ್ಳುತ್ತಿದ್ದೇವೆ. ನೆರೆ ಸಂತ್ರಸ್ತರಿಗೆ ಶಾಶ್ವತ ಪರಿಹಾರ ನೀಡಬೇಕು.

ಸರ್ಕಾರ ದಿ.6 ಒಳಗೆ ರೈತರ ಪರವಾದ ನಿರ್ಧಾರವನ್ನು ಪ್ರಕಟಿಸದಿದ್ದರೆ ದಿ.7 ರಂದು ಉಗ್ರ ಹೋರಾಟ ನಡೆಸಲಾಗುವುದು ಎಂದು ಘಟಪ್ರಭಾ ನದಿ ಸಂತ್ರಸ್ಥರು ಶನಿವಾರ ಜಿಎಲ್ ಬಿಸಿ ಆವರಣದಲ್ಲಿ ಸಭೆಯಲ್ಲಿ ನಿರ್ಧರಿಸಿ ತಹಶೀಲ್ದಾರ್ ವಿನೋದ ಹತ್ತಳ್ಳಿ ಅವರಿಗೆ ಮನವಿ ಸಲ್ಲಿಸಿದರು.

Mudhol: ನೆರೆ ಸಂತ್ರಸ್ತರಿಗೆ ಶಾಶ್ವತ ಪರಿಹಾರ ನೀಡಲು ಗಡುವು. ಇಲ್ಲದಿದ್ದಲ್ಲಿ ಉಗ್ರ ಹೋರಾಟ

ಕಬ್ಬು ಬೆಳೆಗಾರರ ಜಿಲ್ಲಾ ಘಟಕದ ಅಧ್ಯಕ್ಷ ನಾಗೇಶ ಸೋರಗಾಂವಿ, ಜಿಲ್ಲಾ ಪಂಚಾಯ್ತಿ ಮಾಜಿ ಉಪಾಧ್ಯಕ್ಷರಾದ ದುಂಡಪ್ಪ ಲಿಂಗರಡ್ಡಿ, ಮುತ್ತಪ್ಪ ಕೋಮಾರ ಮುಖಂಡರಾದ ಮಹೇಶಗೌಡ ಪಾಟೀಲ, ಸುಗುರಪ್ಪ ಅಕ್ಕಿಮರಡಿ, ಕಬ್ಬು ಬೆಳೆಗಾರರ ಸಂಘದ ತಾಲ್ಲೂಕು ಅಧ್ಯಕ್ಷ ದುಂಡಪ್ಪ ಯರಗಟ್ಟಿ ಮುಂತಾದವರು ಮಾತನಾಡಿ ಬೆಳೆ ಪರಿಹಾರವನ್ನು ಕಬ್ಬಿನ ಬೆಳೆಗೆ ಒಂದು ಎಕರೆಗೆ 1 ಲಕ್ಷ ಹಾಗೂ ಇತರೆ ಬೆಳೆಗಳಿಗೆ 50 ಸಾವಿರ ನೀಡಬೇಕು. ಹಾಗೂ ಎನ್ ಡಿ.ಆರ್.ಎಫ್ ಹಾಗೂ ಎಸ್.ಡಿ.ಆರ್.ಎಫ್ ಮಾನದಂಡಗಳನ್ನು ಬದಲಾವಣೆಯನ್ನು ಮಾಡಬೇಕು. ಪ್ರವಾಹದಿಂದ ಮುಳುಗಡೆಯಾಗುವ ಗ್ರಾಮಗಳಿಗೆ ಹಾಗೂ ಮನೆಗಳಿಗೆ ಶಾಶ್ವತ ಪರಿಹಾರವನ್ನು ಒದಗಿಸಬೇಕು. ಸತತವಾಗಿ ಮುಳುಗಡೆಯಾಗುವ ಜಮೀನುಗಳಿಗೆ ಶಾಶ್ವತ ಪರಿಹಾರ ನೀಡಬೇಕು. ಕಾತರಗಿ ಹಾಗೂ ಕಲಾದಗಿ ಮದ್ಯದ ಸೇತುವೆಯನ್ನು 50 ಮೀಟರ್ ಅಗಲೀಕರಣ ಮಾಡಲು ತುರ್ತು ಕ್ರಮ ಜರುಗಿಸಬೇಕು. ವಿದ್ಯುತ್ ಲೈನ್ ಗಳನ್ನ ಹಾಗೂ ಟಿಸಿಗಳನ್ನು ಕೂಡಲೇ ರಿಪೇರಿ ಮಾಡಿ ಸರಿಪಡಿಸಬೇಕು. ರೈತರ ಪಂಪಸೇಟ್ ಹಾನಿಗೊಳಗಾಗಿದ್ದು ಇವುಗಳಿಗೆ ಪರಿಹಾರ ಒದಗಿಸಬೇಕು ಎಂದು ಆಗ್ರಹಿಸಿದರು.


Spread the love

About Laxminews 24x7

Check Also

ರಸ್ತೆಗುಂಡಿ ಮುಚ್ಚಲು ನೀಡಿದ್ದ ಗಡುವು ಅಂತ್ಯ: ‘Please ask D.K.Shivakumar’ ಎಂದ ಸಿದ್ದರಾಮಯ್ಯ

Spread the loveಬೆಂಗಳೂರು: ರಾಜಧಾನಿಯಲ್ಲಿ ಹಾಳಾಗಿರುವ ರಸ್ತೆ ಗುಂಡಿಗಳನ್ನು ಮುಚ್ಚುವಂತೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಅಧಿಕಾರಿಗಳಿಗೆ ನೀಡಿದ್ದ ಗಡುವು ಇಂದಿಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ