ಬಾಗಲಕೋಟೆ: ಜೆಡಿಎಸ್ ಮತ್ತು ಬಿಜೆಪಿ ಪಕ್ಷಗಳು ಪಾದಯಾತ್ರೆ ನಡೆಸುತ್ತಿರುವುದು ಯಾವ ಪುರುಷಾರ್ಥಕ್ಕೆ ಎಂದು ಪ್ರವಾಸೋದ್ಯಮ ಹಾಗೂ ಕಾನೂನು ಸಚಿವ ಎಚ್.ಕೆ. ಪಾಟೀಲ ಪ್ರಶ್ನಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿ, ಮುಖ್ಯಮಂತ್ರಿ ಕುಟುಂಬದ ಮೇಲೆ ಆಪಾದನೆ ಬಂದಾಗ ಇದೇ ಮೊದಲ ಬಾರಿಗೆ ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖಾ ತಂಡ ರಚಿಸಿದ್ದು ಸಿಎಂ ಸಿದ್ದರಾಮಯ್ಯ.
ಹಿಂದೆ ದೇವೇಗೌಡರು, ಯಡಿಯೂರಪ್ಪ, ಜಗದೀಶ್ ಶೆಟ್ಟರ್ ವಿರುದ್ಧ ಆಪಾದನೆ ಬಂದಾಗ ತಮ್ಮ ಕುಟುಂಬದ ವಿರುದ್ಧವೇ ತನಿಖಾ ತಂಡ ರಚಿಸಿರಲಿಲ್ಲ ಎಂದರು.