Breaking News

ಜೋಗಫಾಲ್ಸ್ ವೀಕ್ಷಣೆಗೆ KSRTC ವಿಶೇಷ ಪ್ಯಾಕೇಜ್

Spread the love

ದಾವಣಗೆರೆ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವತಿಯಿಂದ ಪ್ರತಿ ವರ್ಷದಂತೆ ಪ್ರಸಕ್ತ ವರ್ಷದಲ್ಲಿಯೂ ಆಗಸ್ಟ್ 3 ರಿಂದ ಪ್ರತಿ ಶನಿವಾರ, ಭಾನುವಾರ ರಜಾದಿನಗಳಂದು ದಾವಣಗೆರೆ ಹಾಗೂ ಹರಿಹರದಿಂದ ವಿಶ್ವವಿಖ್ಯಾತ ಪ್ರೇಕ್ಷಣೀಯ ಸ್ಥಳವಾದ ಜೋಗಫಾಲ್ಸ್, ಶಿರಸಿ ವಿಕ್ಷಣೆಗೆ ವಿಶೇಷ ಪ್ಯಾಕೇಜ್‌ನೊಂದಿಗೆ ರಾಜಹಂಸ ಹಾಗೂ ವೇಗದೂತ(ಅಶ್ವಮೇದ) ಸಾರಿಗೆಯನ್ನು ಕಾರ್ಯಾಚರಣೆಗೆ ಬಿಡಲಾಗುತ್ತಿದೆ.

ಪ್ರವಾಸಿಗರಿಗೆ ಗುಡ್ ನ್ಯೂಸ್: ಜೋಗಫಾಲ್ಸ್ ವೀಕ್ಷಣೆಗೆ KSRTC ವಿಶೇಷ ಪ್ಯಾಕೇಜ್

ಮುಂಗಡ ಬುಕ್ಕಿಂಗ್ ಕೌಂಟರ್‌ಗಳಲ್ಲಿ ಬುಕ್ಕಿಂಗ್ ಮಾಡಲು ಸೌಕರ್ಯ ಕಲ್ಪಿಸಲಾಗಿದೆ. ಅಥವಾ ಆನ್‌ಲೈನ್ ಬುಕ್ಕಿಂಗ್‌ಗಾಗಿ ನಿಗಮದ ವೆಬ್‌ಸೈಟ್ ksrtc.karnataka.gov.in ನಲ್ಲಿ ಸಾರಿಗೆ ಸೌಲಭ್ಯದ ಸದುಪಯೋಗ ಪಡೆದುಕೊಳ್ಳುವಂತೆ ವಿಭಾಗೀಯ ನಿಯಂತ್ರಕರಾದ ಸಿದ್ದೇಶ್ ಎನ್.ಹೆಬ್ಬಾಳ್ ತಿಳಿಸಿದ್ದಾರೆ.


Spread the love

About Laxminews 24x7

Check Also

ಸರ್ಕಾರಿ ವೈದ್ಯರು, ನರ್ಸ್​ಗಳಿಗೆ ಗ್ರಾಮೀಣ ಸೇವೆ ಕಡ್ಡಾಯ

Spread the loveಬೆಂಗಳೂರು: ನಗರ ಪ್ರದೇಶಗಳಲ್ಲಿ ಹಲವು ವರ್ಷಗಳ ಕಾಲ ಸೇವೆ ಸಲ್ಲಿಸುತ್ತಿರುವ ವೈದ್ಯರು, ನರ್ಸ್​ಗಳು ಸೇರಿದಂತೆ ಇತರ ಸಿಬ್ಬಂದಿ ಇನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ