Breaking News

ಮುಳಬಾಗಿಲು | ಆಲಂಗೂರು ಪ್ರತಿಮೆ ನಿರ್ಮಾಣ ಸ್ಥಳ ಪರಿಶೀಲಿಸಿದ ಜಿಲ್ಲಾಧಿಕಾರಿ

Spread the love

ಮುಳಬಾಗಿಲು: ನಗರದ ತಾತಿಪಾಳ್ಯ ವೃತ್ತದಲ್ಲಿ ಆಲಂಗೂರು ಶ್ರೀನಿವಾಸ್ ಪ್ರತಿಮೆ ನಿರ್ಮಾಣ ಮಾಡುತ್ತಿರುವುದನ್ನು ವಿರೋಧಿಸಿ ರಾಜ್ಯ ಹೈಕೋರ್ಟ್‌ ನೋಟಿಸ್ ನೀಡಿದ ಹಿನ್ನೆಲೆಯಲ್ಲಿ ಶುಕ್ರವಾರ ಜಿಲ್ಲಾಧಿಕಾರಿ ಅಕ್ರಂ ಪಾಷ ಭೇಟಿ ನೀಡಿ ಪರಿಶೀಲಿಸಿದರು.

ನಾಡಪ್ರಭು ಕೆಂಪೇಗೌಡರ ಅಶ್ವರೂಢ ಪ್ರತಿಮೆ ಹಾಗೂ ಹಿಂದೆ ತಾಲ್ಲೂಕು ಒಕ್ಕಲಿಗರ ಸಂಘದಿಂದ ಪ್ರತಿಷ್ಠಾಪನೆ ಮಾಡಲು ನಿಲ್ಲಿಸಿರುವ ಕ್ಷೇತ್ರದ ಮಾಜಿ ಶಾಸಕ, ಸಚಿವ ದಿವಂಗತ ಆಲಂಗೂರು ಶ್ರೀನಿವಾಸ್ ಅವರ ಪುತ್ಥಳಿ ಸ್ಥಳವನ್ನು ಪರಿಶೀಲನೆ ನಡೆಸಿ ಮಾಹಿತಿ ಪಡೆದರು.

ಮುಳಬಾಗಿಲು | ಆಲಂಗೂರು ಪ್ರತಿಮೆ ನಿರ್ಮಾಣ ಸ್ಥಳ ಪರಿಶೀಲಿಸಿದ ಜಿಲ್ಲಾಧಿಕಾರಿ

ಪಾದಚಾರಿ ಮಾರ್ಗದಲ್ಲಿ ಆಲಂಗೂರು ಶ್ರೀನಿವಾಸ್ ಪುತ್ಥಳಿ ನಿರ್ಮಾಣ ಮಾಡಿದರೆ ತೊಂದರೆ ಆಗಲಿದೆ ಎಂದು ಸಾರ್ವಜನಿಕರು ಆಕ್ಷೇಪ ವ್ಯಕ್ತಪಡಿಸಿದ್ದರು. ಇದೇ ವಿಚಾರವಾಗಿ ಈಚೆಗೆ ಮುಳಬಾಗಿಲು ತಾಲ್ಲೂಕು ನಾಗರಿಕರ ವೇದಿಕೆ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು. ನ್ಯಾಯಾಲಯ ಕೋಲಾರ ಜಿಲ್ಲಾ ಆಡಳಿತಕ್ಕೆ ನೋಟಿಸ್ ಜಾರಿ ಮಾಡಿದೆ‌.


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ