Breaking News

ಸಿಬಿಐ ಬಂಧನ ಪ್ರಶ್ನಿಸಿದ್ದ ಕೇಜ್ರಿವಾಲ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್

Spread the love

ವದೆಹಲಿ: ಅಬಕಾರಿ ನೀತಿ ಹಗರಣದ ಪ್ರಕರಣದಲ್ಲಿ ಸಿಬಿಐ(CBI) ತನ್ನನ್ನು ಬಂಧಿಸಿರುವುದನ್ನು ಪ್ರಶ್ನಿಸಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಸಲ್ಲಿಸಿರುವ ಅರ್ಜಿಯನ್ನು ಸೋಮವಾರ (ಆಗಸ್ಟ್‌ 05) ದೆಹಲಿ ಹೈಕೋರ್ಟ್‌ ವಜಾಗೊಳಿಸಿದೆ.

ಹೈಕೋರ್ಟ್‌ ಜಸ್ಟೀಸ್‌ ನೀನಾ ಬನ್ಸಾಲ್‌ ಕೃಷ್ಣ ಅವರು ಈ ಆದೇಶವನ್ನು ನೀಡಿದ್ದು, ಈ ಸಂದರ್ಭದಲ್ಲಿ ಕೇಜ್ರಿವಾಲ್‌ ಜಾಮೀನು ಅರ್ಜಿಯನ್ನು ತಿರಸ್ಕರಿಸಿ, ಜಾಮೀನಿಗಾಗಿ ವಿಚಾರಣಾ ಕೋರ್ಟ್‌ ಮೆಟ್ಟಿಲೇರುವಂತೆ ತಿಳಿಸಿರುವುದಾಗಿ ವರದಿಯಾಗಿದೆ.

 

ಅಬಕಾರಿ ನೀತಿ ಹಗರಣದ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಮಾರ್ಚ್‌ 21ರಂದು ಕೇಜ್ರಿವಾಲ್‌ ಅವರನ್ನು ಬಂಧಿಸಿದ್ದರು. ಏತನ್ಮಧ್ಯೆ ಸುಪ್ರೀಂಕೋರ್ಟ್‌ ಲೋಕಸಭಾ ಚುನಾವಣಾ ಪ್ರಚಾರಕ್ಕಾಗಿ ಮೇ10ರಿಂದ ಜೂನ್‌ 1ರವರೆಗೆ ಮಧ್ಯಂತರ ಜಾಮೀನು ನೀಡಿತ್ತು. ವಾರಗಳ ನಂತರ ರಜಾಕಾಲ ಪೀಠದ ಜಡ್ಜ್‌ ನಿಯಾಯ್‌ ಬಿಂದು ಕೇಜ್ರಿವಾಲ್‌ ಗೆ ಜಾಮೀನು ಮಂಜೂರು ಮಾಡಿದ್ದು, ಇದಕ್ಕೆ ದೆಹಲಿ ಹೈಕೋರ್ಟ್‌ ತಡೆಯಾಜ್ಞೆ ನೀಡುವ ಮೂಲಕ ಕೇಜ್ರಿವಾಲ್‌ ಜೈಲುವಾಸ ಮುಂದುವರಿಯುವಂತಾಗಿತ್ತು.


Spread the love

About Laxminews 24x7

Check Also

ಬೆಣ್ಣೆನಗರಿಗೆ ಬರಲಿದೆ ಐಟಿ ಪಾರ್ಕ್

Spread the loveದಾವಣಗೆರೆ: ಬೆಣ್ಣೆನಗರಿ ದಾವಣಗೆರೆ ಮಧ್ಯ ಕರ್ನಾಟಕದ ಕೇಂದ್ರ ಬಿಂದು. ಪ್ರಗತಿಯತ್ತ ಸಾಗುತ್ತಿರುವ ದಾವಣಗೆರೆಯಲ್ಲಿ ಐಟಿಬಿಟಿ ಕಂಪನಿಗಳು ಕರೆತರಲು ಇಲ್ಲಿಲ್ಲದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ