ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ನಿವಾರ್ ಸೈಕ್ಲೋನ್ ಇನ್ನೆರಡು ದಿನಗಳಲ್ಲಿಯೇ ಅಪ್ಪಳಿಸಲಿದ್ದು, ಬೆಂಗಳೂರಿನಲ್ಲಿ ಭಾರೀ ಮಳೆಯಾಗುವ ಸಾಧ್ಯತೆಗಳಿವೆ. ಸೈಕ್ಲೋನ್ ಪರಿಣಾಮ ನವೆಂಬರ್ 25 ರಿಂದ 27ರವರೆಗೆ ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯಾಗಲಿದೆ.ಬಂಗಾಲ ಉಪಸಾಗರ ನೈಋತ್ಯ ಭಾಗದಲ್ಲಿ ವಾಯುಭಾರ ಕುಸಿತವಾಗಿದ್ದು, ಮುಂದಿನ 24 ಗಂಟೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ನ.25 ರಂದು ತಮಿಳುನಾಡು ಹಾಗೂ ಪಾಂಡಿಚೇರಿ ಕರಾವಳಿಯಲ್ಲಿ ದಾಟಿ ಕಾರೈಕಲ್, ಮಾಮಲಪುರಂ ಹತ್ತಿರ ಸೈಕ್ಲೋನ್ ಕ್ರಾಸ್ ಆಗುತ್ತೆ. ಇದರ ಪ್ರಭಾವದಿಂದಾಗಿ ಕರಾವಳಿಯ ಕೆಲ ಭಾಗದಲ್ಲಿ ನ.25, 26, 27 ರಂದು ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ. ಉತ್ತರ ಒಳನಾಡಿನಲ್ಲಿ ನ. 23ರಂದು ಒಣ ಹವೆ ಇರಲಿದ್ದು, ನ. 24 ರಿಂದ 27 ರವರೆಗೆ ಕೆಲವೆಡೆ ಮಳೆಯಾಗುವ ಸಾಧ್ಯತೆಯಿದೆ.
