Breaking News

ಮಾದಕ ವಸ್ತುಗಳ ಬಳಕೆ; 251 ಮಂದಿ ವಶಕ್ಕೆ ಪಡೆದ ಪೊಲೀಸರು

Spread the love

ಹುಬ್ಬಳ್ಳಿ: ವಾರದ ಹಿಂದಷ್ಟೇ ಮಾದಕ ವಸ್ತುಗಳ ಬಳಕೆ ಮಾಡುವವರ ವಿರುದ್ಧ ಕಾರ್ಯಾಚರಣೆ ನಡೆಸಿ 255 ಮಂದಿ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದ ಹು-ಧಾ ಮಹಾನಗರ ಪೊಲೀಸರು, ಭಾನುವಾರ ಮತ್ತೊಮ್ಮೆ ಕಾರ್ಯಾಚರಣೆ ನಡೆಸಿ 251 ಮಂದಿ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಹುಬ್ಬಳ್ಳಿ |ಮಾದಕ ವಸ್ತುಗಳ ಬಳಕೆ; 251 ಮಂದಿ ವಶಕ್ಕೆ ಪಡೆದ ಪೊಲೀಸರು

ಮಾದಕ ವಸ್ತು ಬಳಸುವ ಸಂಶಯಾಸ್ಪದ 467 ಮಂದಿಯನ್ನು ವಶಕ್ಕೆ ಪಡೆದು ಧಾರವಾಡ ಜಿಲ್ಲಾಸ್ಪತ್ರೆ, ಡಿಮಾನ್ಸ್‌ ಮತ್ತು ಕಿಮ್ಸ್‌ ಆಸ್ಪತ್ರೆಗೆ ಕರೆದೊಯ್ದು, ಪರೀಕ್ಷೆ ಮಾಡಿಸಿದರು. 251 ಮಂದಿ ಮಾದಕ ವಸ್ತುಗಳನ್ನು ಬಳಸಿರುವುದು ವರದಿಯಾಗಿದ್ದು, ಅವರ ವಿರುದ್ಧ ವಿವಿಧ ಪೊಲೀಸ್‌ ಠಾಣೆಗಳಲ್ಲಿ ಮಾದಕ ವಸ್ತು ಬಳಕೆ ನಿಷಿದ್ಧ ಕಾಯ್ದೆಯಡಿ 44 ಪ್ರಕರಣಗಳನ್ನು ದಾಖಲಿಸಿಕೊಂಡಿದ್ದಾರೆ.

ಬಂಧಿತರಾದ ಮಾದಕ ವ್ಯಸನಿಗಳನ್ನೆಲ್ಲ ಆರ್‌.ಎನ್‌. ಶೆಟ್ಟಿ ಕಲ್ಯಾಣ ಮಂಟಪದಲ್ಲಿ ಸೇರಿಸಿ, ಪಾಲಕರ ಸಮ್ಮುಖದಲ್ಲಿ ವೈದ್ಯರಿಂದ ಆಪ್ತ ಸಮಾಲೋಚನೆ ನಡೆಸಿ, ಅರಿವು ಮೂಡಿಸಲಾಯಿತು. ಬಹುತೇಕ ಪಾಲಕರಿಗೆ ತಮ್ಮ ಮಕ್ಕಳು ಮಾದಕ ವ್ಯಸನಿಗಳಾಗಿರುವ ಬಗ್ಗೆ ಮಾಹಿತಿಯೇ ಇರಲಿಲ್ಲ. ಅದನ್ನರಿತ ಪೊಲೀಸ್‌ ಕಮಿಷನರ್‌ ಎನ್‌.ಶಶಿಕುಮಾರ್‌ ಪಾಲಕರ ಸಮ್ಮುಖದಲ್ಲಿಯೇ ಮಕ್ಕಳನ್ನು ತರಾಟೆಗೆ ತೆಗೆದುಕೊಂಡು ಎಚ್ಚರಿಕೆ ನೀಡಿದರು.


Spread the love

About Laxminews 24x7

Check Also

ರಸ್ತೆಗುಂಡಿ ಮುಚ್ಚಲು ನೀಡಿದ್ದ ಗಡುವು ಅಂತ್ಯ: ‘Please ask D.K.Shivakumar’ ಎಂದ ಸಿದ್ದರಾಮಯ್ಯ

Spread the loveಬೆಂಗಳೂರು: ರಾಜಧಾನಿಯಲ್ಲಿ ಹಾಳಾಗಿರುವ ರಸ್ತೆ ಗುಂಡಿಗಳನ್ನು ಮುಚ್ಚುವಂತೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಅಧಿಕಾರಿಗಳಿಗೆ ನೀಡಿದ್ದ ಗಡುವು ಇಂದಿಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ