Breaking News

ಆ.15ರಂದು ಬೆಳಿಗ್ಗೆ 8ರಿಂದ ಮಧ್ಯಾಹ್ನ 2ರವರೆಗೆ ರಕ್ತದಾನ ಶಿಬಿರ

Spread the love

ಬೆಳಗಾವಿ: ‘ಇಲ್ಲಿನ ಹಿಂದವಾಡಿಯ ಮಹಾವೀರ ಭವನದಲ್ಲಿ ಜೈನ ಇಂಟರ್ ನ್ಯಾಷನಲ್ ಟ್ರೇಡ್ ಆರ್ಗನೈಸೇಷನ್(ಜಿತೋ) ಬೆಳಗಾವಿ ಘಟಕದ ಆಶ್ರಯದಲ್ಲಿ ಸ್ವಾತಂತ್ರ್ಯೋತ್ಸವ ಪ್ರಯುಕ್ತ ಆ.15ರಂದು ಬೆಳಿಗ್ಗೆ 8ರಿಂದ ಮಧ್ಯಾಹ್ನ 2ರವರೆಗೆ

ಬೃಹತ್ ರಕ್ತದಾನ ಶಿಬಿರ ಆಯೋಜಿಸಲಾಗಿದೆ’ ಎಂದು ಸಂಯೋಜಕ ಕುಂತಿನಾಥ ಕಲಮನಿ ಹೇಳಿದರು.

ರಕ್ತದಾನ ಶಿಬಿರ 15ರಂದು

ಇಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಸಂಕಷ್ಟ ಸಮಯದಲ್ಲಿ‌ ಜನರಿಗೆ ನೆರವಾಗುವ ದೃಷ್ಟಿಯಿಂದ ನಾಲ್ಕು ವರ್ಷಗಳಿಂದ ಈ ಶಿಬಿರ ಆಯೋಜಿಸುತ್ತಿದ್ದೇವೆ. ಕಳೆದ ವರ್ಷ 936 ಯೂನಿಟ್ ರಕ್ತ ಸಂಗ್ರಹವಾಗಿತ್ತು. ಈ ಬಾರಿ 1,200 ಯೂನಿಟ್ ರಕ್ತ ಸಂಗ್ರಹವಾಗುವ ನಿರೀಕ್ಷೆ ಇದೆ’ ಎಂದರು.

‘ಕೆಎಲ್‌ಇ ರಕ್ತನಿಧಿ‌ ಕೇಂದ್ರ, ಬಿಮ್ಸ್ ರಕ್ತನಿಧಿ ಕೇಂದ್ರ, ಮಹಾವೀರ ರಕ್ತನಿಧಿ ಕೇಂದ್ರ, ಬೆಲಗಮ್ ರಕ್ತನಿಧಿ ಕೇಂದ್ರದಲ್ಲಿ ಶಿಬಿರದಲ್ಲಿ ಪಾಲ್ಗೊಳ್ಳಲಿವೆ. 45 ಸಂಘ-ಸಂಸ್ಥೆಗಳು ಕೈಜೋಡಿಸಿವೆ’ ಎಂದು ಹೇಳಿದರು.

‘ಇಲ್ಲಿ ರಕ್ತದಾನ ಮಾಡುವವರಿಗೆ ದಿ‌ ನ್ಯೂ ಇಂಡಿಯಾ ಅಶುರೆನ್ಸ್ ಕೋ-ಲಿಮಿಟೆಡ್ ಕಂಪನಿಯವರು ಒಂದು ವರ್ಷದ ಅವಧಿಗೆ ₹1 ಲಕ್ಷ ಅಪಘಾತ ವಿಮೆ ಸೌಕರ್ಯ ಕಲ್ಪಿಸಲಿದ್ದಾರೆ. ಮಾಹಿತಿಗೆ ಮೊ.ಸಂ.9035187431 ಸಂಪರ್ಕಿಸಬಹುದು’ ಎಂದು ವಿವರಿಸಿದರು.

 


Spread the love

About Laxminews 24x7

Check Also

ನಾಲ್ಕು ರಾಜ್ಯಗಳ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

Spread the loveಭಾರತೀಯ ಜನತಾ ಪಾರ್ಟಿ (ಬಿಜೆಪಿ) ಗೋವಾ ಸೇರಿದಂತೆ ನಾಲ್ಕು ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ