Breaking News

ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಕಾಮುಕನಿಗೆ 20 ವರ್ಷ ಜೈಲು

Spread the love

ಕೊಪ್ಪಳ: ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕು ಗ್ರಾಮವೊಂದರ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದ ಕಾಮುಕನಿಗೆ 20 ವರ್ಷ ಜೈಲು ಮತ್ತು 20 ಸಾವಿರ ರೂಪಾಯಿ ದಂಡ ವಿಧಿಸಲಾಗಿದೆ.

ಅತ್ಯಾಚಾರ ಎಸಗಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಬಸವರಾಜ ಮುದ್ಲಾಪುರ ಎಂಬುವನಿಗೆ ಕೊಪ್ಪಳ ಜಿಲ್ಲಾ ಪೋಕ್ಸೋ ನ್ಯಾಯಾಲಯದ ನ್ಯಾಯಾಧೀಶ ಕುಮಾರ ಡಿ.ಕೆ.

ಅವರು ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿ ತೀರ್ಪು ನೀಡಿದ್ದಾರೆ.

2022ರ ಮಾರ್ಚ್ 20ರಂದು ಕುಕನೂರು ಪೊಲೀಸ್ ಠಾಣಾ ವ್ಯಾಪ್ತಿಯ ಗ್ರಾಮವೊಂದರಲ್ಲಿ ಬಾಲಕಿಯನ್ನು ಅಪಹರಿಸಿ ಪಾಳು ಬಿದ್ದ ಕೊಠಡಿಯಲ್ಲಿ ಅತ್ಯಾಚಾರ ಎಸಗಿದ್ದ. ಯಲಬುರ್ಗಾದ ಆಗಿನ ಸಿಪಿಐ ಎಂ. ನಾಗರೆಡ್ಡಿ ತನಿಖೆ ನಡೆಸಿ ಆರೋಪ ಪಟ್ಟಿ ಸಲ್ಲಿಸಿದ್ದರು. ವಿಶೇಷ ಸರ್ಕಾರಿ ಅಭಿಯೋಜಕರಾದ ಗೌರಮ್ಮ ದೇಸಾಯಿ ವಾದ ಮಂಡಿಸಿದ್ದರು.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ