ಬೆಳಗಾವಿ: ಗಲಭೆ ಪೀಡಿತ ಬಾಂಗ್ಲಾದೇಶದಿಂದ 25 ವೈದ್ಯಕೀಯ ವಿದ್ಯಾರ್ಥಿಗಳು ಪಾರಾಗಿ ಬೆಳಗಾವಿಗೆ ಆಗಮಿಸಿದ್ದಾರೆ.
ನಾಲ್ಕು ದಿನಗಳ ಹಿಂದೆಯೇ ಈ ಎಲ್ಲ ವಿದ್ಯಾರ್ಥಿಗಳು ಬೆಳಗಾವಿಗೆ ಬಂದಿದ್ದಾರೆ. ಬೆಳಗಾವಿ ಸಂಸದ ಜಗದೀಶ ಶೆಟ್ಟರ ಹಾಗೂ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ನೆರವಿನಿಂದ ಸುರಕ್ಷಿತವಾಗಿ ಬೆಳಗಾವಿಗೆ ಬಂದಿದ್ದಾರೆ.
ಬಾಂಗ್ಲಾಬಾಂಗ್ಲಾದಿಂದ ಬೆಳಗಾವಿಗೆ ಬಂದ ವೈದ್ಯಕೀಯ ವಿದ್ಯಾರ್ಥಿ ನೇಹಲ್ ಸವಣೂರು ಮಾಧ್ಯಮದವರೊಂದಿಗೆ ಮಾತನಾಡಿ, ಬಾಂಗ್ಲಾದಲ್ಲಿ ನಾನೂ ಭಯಭೀತನಾಗಿದ್ದೆ. ಈಗಿನ ಪರಿಸ್ಥಿತಿ ಇನ್ನೂ ಭಯಂಕರ ಇದೆ. ಹೇಗೋ ಬಚಾವ್ ಆಗಿ ಗಲಭೆ ಪೀಡಿತ ದೇಶದಿಂದ ಬಂದಿದ್ದೇವೆ. ಈ ಸಂದರ್ಭದಲ್ಲಿ ನಾವು ಬಾಂಗ್ಲಾದಲ್ಲಿಯೇ ಇದ್ದಿದ್ದರೆ ಕೊಠಡಿಯಲ್ಲಿ ಕೂಡಿ ಹಾಕಿ ಹಿಂಸೆ ನೀಡುತ್ತಿದ್ದರು ಎಂದು ಬಾಂಗ್ಲಾದಲ್ಲಿನ ಹಿಂಸಾಚಾರದ ಭಯಾನಕ ಘಟನೆಯನ್ನು ನೇಹಲ್ ನೆನಪಿಸಿಕೊಂಡರು.