ಪಡಿತರಚೀಟಿ ತಿದ್ದುಪಡಿಗೆ ದಿನಾಂಕ ವಿಸ್ತರಣೆ-ಯಾವೆಲ್ಲಾ ದಾಖಲೆಗಳು ಬೇಕು?-ಇಲ್ಲಿದೆ ಮಾಹಿತಿ
ಲೋಕಾಭೆ ಚುನಾವಣೆ ಮುಗಿದ ಬಳಿಕ ಪಡಿತರ ಚೀಟಿಯಲ್ಲಿ ಹೆಸರು ಸೇರ್ಪಡೆ ಅಥವಾ ತಿದ್ದುಪಡಿಗೆ ಅವಕಾಶ ಕಲ್ಪಿಸಲಾಗಿದ್ದು, ಇದೀಗ ಈ ದಿನಾಂಕವನ್ನು ಆಗಸ್ಟ್ 10ರವರೆಗೆ ವಿಸ್ತರಣೆ ಮಾಡಲಾಗಿದೆ. ಹಾಗಾದರೆ ಪಡಿತರ ಚೀಟಿ ತಿದ್ದುಪಡಿಗೆ ಯಾವೆಲ್ಲ ದಾಖಲೆ ಬೇಕು ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ತಿಳಿಯಿರಿ.

ಸಮಯದ ವಿವರ: ಪಡಿತರ ಚೀಟಿದಾರರು ಹೆಸರು ತಿದ್ದುಪಡಿ, ಹೊಸ ಸದಸ್ಯರ ಸೇರ್ಪಡೆ, ವಿಳಾಸ ಬದಲಾವಣೆ, ಹೆಸರು ತೆಗೆದುಹಾಕುವುದಕ್ಕೆ ಅವಕಾಶ ನೀಡಲಾಗಿದೆ, ಆಗಸ್ಟ್ 10ರ ವರೆಗೆ ಬೆಳಗ್ಗೆ 10ರಿಂದ ಸಂಜೆ 5 ರವರೆಗೆ ತಿದ್ದುಪಡಿಗೆ ಅವಕಾಶ ಕಲ್ಪಿಸಲಾಗಿದೆ.
ಬೆಂಗಳೂರು ಒನ್, ಸೈಬರ್ ಸೆಂಟರ್‌ಗಳಲ್ಲಿ ಹೊಸ ಕಾರ್ಡ್ ಅಥವಾ ಹೆಸರು ಸೇರ್ಪಡೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಇನ್ನು ಎಪಿಎಲ್ ಕಾರ್ಡ್ ಪಡೆಯುವವರು ಕೂಡ ಆನ್ನೈನ್‌ನಲ್ಲಿ ಅರ್ಜಿ ಸಲ್ಲಿಸಬೇಕು. ಈಗಾಗಲೇ ಪಡಿತರ ಚೀಟಿ ಹೊಂದಿದವರು ಹೊಸದಾಗಿ ಮಕ್ಕಳು ಅಥವಾ ತಮ್ಮ ಕುಟುಂಬದ ಇತರೆ ಸದಸ್ಯರ ಸೇರ್ಪಡೆಗೆ ಅವಕಾಶ ನೀಡಲಾಗುವುದು. ಹೆಚ್ಚಿನ ಮಾಹಿತಿಗಾಗಿ https://ahara.kar.nic.in ವೆಬ್‌ಸೈಟ್‌ಗೆ ಭೇಟಿ ನೀಡಬಹುದಾಗಿದೆ.
ಹೊಸ ಸದಸ್ಯರ ಸೇರ್ಪಡೆ ಹೇಗೆ?: ನಿಮ್ಮ ಪಡಿತರ ಚೀಟಿಯ ಮೂಲ ದಾಖಲೆ ಮತ್ತು ಮಗುವಿನ ಜನನ ಪ್ರಮಾಣಪತ್ರ ಜೊತೆಗೆ ಮಗುವಿನ ಪೋಷಕರ ಆಧಾರ್ ಕಾರ್ಡ್ ಬೇಕಾಗುತ್ತದೆ. ಹೆಂಡತಿಯ ಹೆಸರನ್ನು ಸೇರ್ಪಡೆ ಮಾಡುವಾಗ ಆ ಮಹಿಳೆಯ ಆಧಾರ್ ಮತ್ತು ಗಂಡನ ಮನೆಯ ಪಡಿತರ ಚೀಟಿ ಪ್ರತಿಯನ್ನು ಕೊಡಬೇಕಾಗುತ್ತದೆ.
ಹೊಸ ಪಡಿತರ ಚೀಟಿ ಪಡೆಯುವ ವಿಧಾನ
* ಮೊದಲು ಅಧಿಕೃತ ವೆಬ್ ಸೈಟ್ https://ahara.kar.nic.in/homeಗೆ ಭೇಟಿ ನೀಡಿ
* ಮುಖ್ಯ ಪುಟದಲ್ಲಿ ಇ-ಸೇವೆಗಳನ್ನು ಆಯ್ಕೆ ಮಾಡಿ.
* ತಿದ್ದುಪಡಿ ಅಥವಾ ಹೊಸ ಸೇರ್ಪಡೆಗೆ ವಿನಂತಿ ಆಯ್ಕೆಯನ್ನು ಕ್ಲಿಕ್ ಮಾಡಿ.
* ಹೊಸ ಪೇಜ್‌ನಲ್ಲಿ ಫಾರ್ಮ್‌ನಲ್ಲಿ ಅಗತ್ಯ ಮಾಹಿತಿಯನ್ನು ಭರ್ತಿ ಮಾಡಬೇಕಾಗುತ್ತದೆ. ಬಳಿಕ ನಂತರ ಸೂಚಿಸಲಾಗುವ ಎಲ್ಲಾ ದಾಖಲೆಗಳನ್ನು ಸ್ಕ್ಯಾನ್ ಪ್ರತಿಯನ್ನು ಅನಲೋಡ್ ಮಾಡಿ.
* ಅಪ್‌ಲೋಡ್ ಮಾಡಿದ ನಂತರ ಫಾರ್ಮ್ ಅನ್ನು ಸಬ್ಮಿಟ್ ಮಾಡಿ.
* ಅರ್ಜಿ ಸಲ್ಲಿಸುವ ವೇಳೆ ನೀವು ನೀಡಿರುವಂತಹ ಎಲ್ಲ ದಾಖಲಾತಿಗಳು ಸರಿಯಾಗಿದ್ದರೆ, ನಿಮ್ಮ ಮನಗೆ ಅಪ್‌ಡೇಟ್ ಆಗಿರುವ ಹೊಸ ಪಡಿತರ ಚೀಟಿಯನ್ನು ನೀಡಲಾಗುತ್ತದೆ.
Laxmi News 24×7