Breaking News

ಯಮಕನಮರಡಿ: 20 ದಿನವಾದರೂ ಪೂರೈಕೆಯಾಗದ ನೀರು

Spread the love

ಮಕನಮರಡಿ: ಮತಕ್ಷೇತ್ರದ ವ್ಯಾಪ್ತಿಗೆ ಬರುವ, ಸಚಿವ ಸತೀಶ ಜಾರಕಿಹೊಳಿ ಅವರ ಕ್ಷೇತ್ರ ಹೆಬ್ಬಾಳದಲ್ಲಿ 20 ದಿನಗಳಿಂದ ಕುಡಿಯುವ ನೀರು ಪೂರೈಕೆಯಾಗದ ಹಿನ್ನೆಲೆ ಮಹಿಳೆಯರು ಖಾಲಿ ಕೊಡ ಪ್ರದರ್ಶಿಸಿ, ಗ್ರಾಮ ಪಂಚಾಯಿತಿ ಎದುರು ಪ್ರತಿಭಟಿಸಿರು.

’40 ದಿನಗಳಿಂದ ವಿಪರೀತ ಮಳೆಯಾದರೂ ಗ್ರಾಮಕ್ಕೆ ಕುಡಿಯುವ ನೀರಿಲ್ಲ.

ಯಮಕನಮರಡಿ: 20 ದಿನವಾದರೂ ಪೂರೈಕೆಯಾಗದ ನೀರು

ಹಿರಣ್ಯಕೇಶಿ ನದಿಯಿಂದ ಕೇವಲ 1 ಕಿ.ಮೀ ಅಂತರದಲ್ಲಿರುವ ಮತ್ತು ಹಿಡಕಲ್ ಜಲಾಶಯದಿಂದ 14ಕಿ.ಮೀ ದೂರದಲ್ಲಿರುವ ಗ್ರಾಮಕ್ಕೆ ನೀರಿನ ಸಮಸ್ಯೆ ಇದೆ. 15 ಸಾವಿರ ಜನಸಂಖ್ಯೆ ಹೊಂದಿದ ಗ್ರಾಮಕ್ಕೆ 20 ದಿನಕ್ಕೊಮ್ಮೆ ನೀರು ಬಿಟ್ಟರೇ ಹೇಗೆ?’ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು.

ಗ್ರಾಮ ಪಂಚಾಯಿತಿ ವಿರುದ್ಧ ಘೋಷಣೆ ಕೂಗಿದ ಮಹಿಳೆಯರು, ಗ್ರಾಮ ಪಂಚಾಯಿತಿ ಕಚೇರಿಯ ಬೀಗ ಜಡಿದು ಪ್ರತಿಭಟಿಸಿದರು. ಹುಕ್ಕೇರಿ ಎಇಇ, ಪಿಡಿಒ, ಗ್ರಾಮ ಪಂಚಾಯಿತಿ ಅಧ್ಯಕ್ಷ, ಸದಸ್ಯರು ಯಾರೂ ಸ್ಥಳಕ್ಕೆ ಭೇಟಿ ನೀಡಲಿಲ್ಲ.

ಮಹಾದೇವಿ ಮಠಪತಿ, ಸುಶವ್ವಾ ಮಾಳಗಿ, ಪೂಜಾ ಮಠಪತಿ, ಜಯಶ್ರೀ ಮಠಪತಿ ಸೇರಿದಂತೆ ಅನೇಕ ಮಹಿಳೆಯರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಲೋಕಸಭಾ ಚುನಾವಣೆಯಲ್ಲಿ ಈ ಗ್ರಾಮದಿಂದ ಕಾಂಗ್ರೆಸ್ ಪಕ್ಷಕ್ಕೆ ಮತದಾನ ಕಡಿಮೆ ಆಗಿರುವುದರಿಂದ ಈ ಪರಿಸ್ಥಿತಿ ನಿರ್ಮಾಣವಾಗಿದೆ

-ರಾವುಸಾಹೇಬ ಪಾಟೀಲ ಜೆಡಿಎಸ್ ಕಾರ್ಯಕರ್ತ ಹೆಬ್ಬಾಳ


Spread the love

About Laxminews 24x7

Check Also

5 ಹುಲಿಗಳು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಅರಣ್ಯಾಧಿಕಾರಿಗಳಿಗೆ ಕಡ್ಡಾಯ ರಜೆ ನೀಡಿ ಪಿಸಿಸಿಎಫ್ ಆದೇಶಿಸಿದ್ದಾರೆ.

Spread the loveಚಾಮರಾಜನಗರ: ಮಲೆಮಹದೇಶ್ವರ ವನ್ಯಜೀವಿಧಾಮದ ಮೀಣ್ಯಂ ಅರಣ್ಯದಲ್ಲಿ 5 ಹುಲಿಗಳು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಅರಣ್ಯಾಧಿಕಾರಿಗಳಿಗೆ ಕಡ್ಡಾಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ