ಸೌಹಾರ್ದದಿಂದ ಗಣೇಶೋತ್ಸವ ಆಚರಣೆಗೆ ಸಹಕರಿಸಿ: ಜಿಲ್ಲಾಧಿಕಾರಿ

Spread the love

ಬೆಳಗಾವಿ: ‘ನಗರವೂ ಸೇರಿದಂತೆ ಜಿಲ್ಲೆಯಾದ್ಯಂತ ಈ ಬಾರಿ ಶಾಂತಿ, ಸೌಹಾರ್ದದಿಂದ ಗಣೇಶೋತ್ಸವ ಆಚರಣೆಗೆ ಪ್ರತಿಯೊಬ್ಬರೂ ಸಹಕರಿಸಬೇಕು’ ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಕೋರಿದರು.

ಇಲ್ಲಿನ ಕುಮಾರ ಗಂಧರ್ವ ರಂಗಮಂದಿರದಲ್ಲಿ ಬುಧವಾರ ನಡೆದ ಗಣೇಶೋತ್ಸವ ಆಚರಣೆ ಪೂರ್ವಭಾವಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಬೆಳಗಾವಿ | ಸೌಹಾರ್ದದಿಂದ ಗಣೇಶೋತ್ಸವ ಆಚರಣೆಗೆ ಸಹಕರಿಸಿ: ಜಿಲ್ಲಾಧಿಕಾರಿ

‘ಗಣೇಶೋತ್ಸವ ಆಚರಣೆ ನೆಪದಲ್ಲಿ ಕಾನೂನುಬಾಹಿರ ಚಟುವಟಿಕೆ ನಡೆಯದಂತೆ ಅಧಿಕಾರಿಗಳು ಮುನ್ನೆಚ್ಚರಿಕೆ ಕ್ರಮ ವಹಿಸಬೇಕು. ಗಣೇಶನ ಪ್ರತಿಷ್ಠಾಪನೆಗೆ ಅನುಮತಿ ಕೊಡಲು ನಗರದ ಎಂಟು ಠಾಣೆಗಳಲ್ಲಿ ಏಕಗವಾಕ್ಷಿ ಪದ್ಧತಿ ಜಾರಿಗೊಳಿಸಲಾಗಿದೆ. ಯಾವುದೇ ಮಂಡಳದವರು ಪ್ರತಿಷ್ಠಾಪನೆಗೆ ಮುನ್ನ, ಕಡ್ಡಾಯವಾಗಿ ಅನುಮತಿ ಪಡೆಯಬೇಕು. ಗಣೇಶನ ವೀಕ್ಷಣೆಗಾಗಿ ಮಂಟಪಕ್ಕೆ ಬರುವ ಪುರುಷರು ಮತ್ತು ಮಹಿಳೆಯರಿಗೆ ಪ್ರತ್ಯೇಕ ಮಾರ್ಗ ಕಲ್ಪಿಸಬೇಕು. ಜನದಟ್ಟಣೆ ನಿಯಂತ್ರಣಕ್ಕಾಗಿ ಪ್ರವೇಶ ಮತ್ತು ನಿರ್ಗಮನ ದ್ವಾರಗಳನ್ನು ನಿರ್ಮಿಸಬೇಕು’ ಎಂದರು.

‘ಗಣೇಶನ ಮೂರ್ತಿಗಳ ವಿಸರ್ಜನೆಗಾಗಿ ನಗರದಲ್ಲಿರುವ ಎಲ್ಲ ಹೊಂಡಗಳನ್ನು ಸ್ವಚ್ಛಗೊಳಿಸಲಾಗುತ್ತಿದೆ’ ಎಂದರು.

 


Spread the love

About Laxminews 24x7

Check Also

ಆಲ್ ಇಂಡಿಯಾ ಕ್ರಿಕೆಟ್ ಟೂರ್ನಿ 12ರಿಂದ

Spread the loveಬೆಳಗಾವಿ: ಪ್ರಥಮ ಬಾರಿಗೆ ಬೆಳಗಾವಿ ನಗರದಲ್ಲಿ ಮುರುಘೇಂದ್ರಗೌಡ ಫೌಂಡೇಷನ್ ಆಶ್ರಯದಲ್ಲಿ ಅಂತಾರಾಷ್ಟ್ರೀಯ, ರಾಷ್ಟ್ರೀಯ ಮಟ್ಟದ ಕ್ರಿಕೆಟ್ ಕ್ರೀಡಾಪಟುಗಳನ್ನು ಒಳಗೊಂಡಿರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ