ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರು ರಾಜೀನಾಮೆ ಕೊಡಬೇಕು ಎಂದು ವಿಪಕ್ಷಗಳು ಹೋರಾಟ ಮಾಡುತ್ತಿರುವ ಬೆನ್ನಲ್ಲೇ ಕೋರ್ಟ್ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ ಶಾಕ್ ಕೊಟ್ಟಿದೆ. ಆಗಸ್ಟ್ 29ರಂದು ಖುದ್ದು ಹಾಜರಾಗಬೇಕು ಎಂದು ಸಿಎಂ, ಡಿಸಿಎಂಗೆ ಬೆಂಗಳೂರಿನ 42ನೇ ಎಸಿಎಂಎಂ ಕೋರ್ಟ್ ಸಮನ್ಸ್ ಜಾರಿ ಮಾಡಿದೆ.

ಇದರಿಂದ ಸಿಎಂ ಮತ್ತು ಡಿಸಿಎಂಗೆ ಸಂಕಷ್ಟ ಎದುರಾಗಿದೆ.
ರಾಹುಲ್ ಗಾಂಧಿ ವಿರುದ್ಧ ಜಾರಿ ನಿರ್ದೇಶನಾಲಯ (ಇಡಿ) ವಿಚಾರಣೆ ಖಂಡಿಸಿ ಪ್ರತಿಭಟನೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್ ಸಮನ್ಸ್ ಕೊಟ್ಟಿದೆ. ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಹೆಸರಿನಲ್ಲಿ ಹಣ ಅಕ್ರಮ ವರ್ಗಾವಣೆ ಆರೋಪದಲ್ಲಿ ಜಾರಿ ನಿರ್ದೇಶನಾಲಯ ರಾಹುಲ್ ಗಾಂಧಿಗೆ ಅನಗತ್ಯ ಕಿರುಕುಳ ಕೊಡುತ್ತಿದೆ ಎಂದು ಆರೋಪಿಸಿ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಸೇರಿದಂತೆ ಕಾಂಗ್ರೆಸ್ ನಾಯಕರು ಬೆಂಗಳೂರಿನಲ್ಲಿ ಪ್ರತಿಭಟನೆ ಮಾಡಿದ್ದರು.
Laxmi News 24×7