Breaking News

ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್​​ಗೆ ಶಾಕ್‌

Spread the love

ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರು ರಾಜೀನಾಮೆ ಕೊಡಬೇಕು ಎಂದು ವಿಪಕ್ಷಗಳು ಹೋರಾಟ ಮಾಡುತ್ತಿರುವ ಬೆನ್ನಲ್ಲೇ ಕೋರ್ಟ್ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ ಶಾಕ್ ಕೊಟ್ಟಿದೆ. ಆಗಸ್ಟ್ 29ರಂದು ಖುದ್ದು ಹಾಜರಾಗಬೇಕು ಎಂದು ಸಿಎಂ, ಡಿಸಿಎಂಗೆ ಬೆಂಗಳೂರಿನ 42ನೇ ಎಸಿಎಂಎಂ ಕೋರ್ಟ್​ ಸಮನ್ಸ್ ಜಾರಿ ಮಾಡಿದೆ.

ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್​​ಗೆ ಶಾಕ್‌; ವಿಚಾರಣೆಗ ಹಾಜರಾಗುವಂತೆ ಸಮನ್ಸ್ ಕೊಟ್ಟ ಕೋರ್ಟ್

ಇದರಿಂದ ಸಿಎಂ ಮತ್ತು ಡಿಸಿಎಂಗೆ ಸಂಕಷ್ಟ ಎದುರಾಗಿದೆ.

ರಾಹುಲ್ ಗಾಂಧಿ ವಿರುದ್ಧ ಜಾರಿ ನಿರ್ದೇಶನಾಲಯ (ಇಡಿ) ವಿಚಾರಣೆ ಖಂಡಿಸಿ ಪ್ರತಿಭಟನೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್ ಸಮನ್ಸ್ ಕೊಟ್ಟಿದೆ. ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಹೆಸರಿನಲ್ಲಿ ಹಣ ಅಕ್ರಮ ವರ್ಗಾವಣೆ ಆರೋಪದಲ್ಲಿ ಜಾರಿ ನಿರ್ದೇಶನಾಲಯ ರಾಹುಲ್ ಗಾಂಧಿಗೆ ಅನಗತ್ಯ ಕಿರುಕುಳ ಕೊಡುತ್ತಿದೆ ಎಂದು ಆರೋಪಿಸಿ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಸೇರಿದಂತೆ ಕಾಂಗ್ರೆಸ್ ನಾಯಕರು ಬೆಂಗಳೂರಿನಲ್ಲಿ ಪ್ರತಿಭಟನೆ ಮಾಡಿದ್ದರು.


Spread the love

About Laxminews 24x7

Check Also

ಹೆಸ್ಕಾಂ ನಿರ್ಲಕ್ಷ್ಯಕ್ಕೆ ಕಂಗಾಲಾದ ಬಾದಾಮಿ ರೈತರು: ವಾರವಾದರೂ ಮುಗಿಯದ ವಿದ್ಯುತ್ ಕಂಬಗಳ ದುರಸ್ತಿ ಕಾರ್ಯ!

Spread the love ಹೆಸ್ಕಾಂ ನಿರ್ಲಕ್ಷ್ಯಕ್ಕೆ ಕಂಗಾಲಾದ ಬಾದಾಮಿ ರೈತರು: ವಾರವಾದರೂ ಮುಗಿಯದ ವಿದ್ಯುತ್ ಕಂಬಗಳ ದುರಸ್ತಿ ಕಾರ್ಯ! • …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ