Breaking News

ಈಶ್ವರ್ ಖಂಡ್ರೆ ಅವರನ್ನ ಭೇಟಿಯಾದ ಪವನ್‌ ಕಲ್ಯಾಣ್‌;

Spread the love

ಬೆಂಗಳೂರು: ಆಂಧ್ರ ಪ್ರದೇಶದ ಉಪಮುಖ್ಯಮಂತ್ರಿ, ನಟ ಪವನ್ ಕಲ್ಯಾಣ್ ಅವರು ಇಂದು ಬೆಂಗಳೂರಿಗೆ ಆಗಮಿಸಿ ಸಿಎಂ ಸಿದ್ದರಾಮಯ್ಯ ಹಾಗೂ ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಬೆಂಗಳೂರು ಭೇಟಿ ವೇಳೆ ಪವನ್ ಕಲ್ಯಾಣ್ ಅವರು ಆಂಧ್ರದಲ್ಲಿ ಕಾಡಾನೆಗಳ ಸೆರೆ, ಆನೆ ಕಾರ್ಯಾಚರಣೆ, ಆನೆಗಳನ್ನು ಪಳಗಿಸುವುದು, ಮಾವುತರಿಗೆ ತರಬೇತಿಯ ಕುರಿತು ಸಮಾಲೋಚನೆ ನಡೆಸಿದ್ದಾರೆ ಎನ್ನಲಾಗಿದೆ.

ನಗರದ ಕಾವೇರಿ ನಿವಾಸದಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ ಪವನ್ ಕಲ್ಯಾಣ್ ಮಾತುಕತೆ ನಡೆಸಿದರು. ಆ ಬಳಿಕ ವಿಧಾನಸೌಧದಲ್ಲಿ ಅರಣ್ಯ ಸಚಿವರ ಜೊತೆ ಸಭೆ ನಡೆಸಿದರು. ಇದಕ್ಕೂ ಮುನ್ನ ಈಶ್ವರ್ ಖಂಡ್ರೆ ಅವರಿಗೆ ಶಾಲು ಹಾರ ಹಾಕಿ ತಿರುಪತಿ ಲಡ್ಡು ನೀಡಿ ಸನ್ಮಾನಿಸಿ ಗೌರವಿಸಿದರು.

ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಆಂಧ್ರಪ್ರದೇಶ ಉಪ ಮುಖ್ಯಮಂತ್ರಿ ಪವನ್ ಕಲ್ಯಾಣ್, ಆಂಧ್ರ ಮತ್ತು ರಾಜ್ಯದ ಅರಣ್ಯಾಧಿಕಾರಿಗಳ ಸಭೆಯ ಬಳಿಕ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಆಂಧ್ರಪ್ರದೇಶದ ಮಾನವ-ಪ್ರಾಣಿ ಸಂಘರ್ಷ ನಿಯಂತ್ರಣಕ್ಕೆ ಕುಮ್ಕಿ ಆನೆಗಳನ್ನು ನೀಡುವಂತೆ ಕರ್ನಾಟಕಕ್ಕೆ ಮನವಿ ಮಾಡಿದ್ದು, ರಾಜ್ಯದ ಜನರ ಭಾವನೆಗೆ ಚ್ಯುತಿ ಆಗದಂತೆ ಉನ್ನತ ಮಟ್ಟದ ಸಭೆಯಲ್ಲಿ ಚರ್ಚಿಸಿ ತೀರ್ಮಾನಿಸುವುದಾಗಿ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ. ಬೇರೆ ರಾಜ್ಯಗಳಿಗೆ ಆನೆಗಳನ್ನು ನೀಡುವುದು ಸಾಮಾನ್ಯ ಪ್ರಕ್ರಿಯೆ. ಆದರೆ ದಸರಾ ಆನೆಗಳನ್ನು ಯಾವುದೇ ರಾಜ್ಯಕ್ಕೆ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.


Spread the love

About Laxminews 24x7

Check Also

ಫಾರೆಸ್ಟ್ ಗಾರ್ಡ್ ನಿಗೂಢವಾಗಿ ನಾಪತ್ತೆ, 6 ದಿನ ಕಳೆದರೂ ಸಿಗದ ಸುಳಿವು

Spread the loveಚಿಕ್ಕಮಗಳೂರು, ಜುಲೈ 02: ಜಿಲ್ಲೆಯ ಕಡೂರು (Kadur) ತಾಲೂಕಿನ ನೀಲಗಿರಿ ಪ್ಲಾಂಟೇಶನ್​ನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಫಾರೆಸ್ಟ್ ಗಾರ್ಡ್ (forest guard) ನಿಗೂಢವಾಗಿ ನಾಪತ್ತೆಯಾಗಿರುವಂತಹ ಘಟನೆ ನಡೆದಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ