Breaking News

ಮನೆ ಬಾಗಿಲಿಗೆ ಮಹಾನಗರ ಪಾಲಿಕೆ – ವಿನೂತನ ಕಾರ್ಯಕ್ರಮಕ್ಕೆ ಚಾಲನೆ

Spread the love

ದಾವಣಗೆರೆ: ರಾಜ್ಯದಲ್ಲಿಯೇ ಮೊಟ್ಟ ಮೊದಲ ಬಾರಿಗೆ ಮನೆ ಬಾಗಿಲಿಗೆ ಮಹಾನಗರ ಪಾಲಿಕೆ ಎಂಬ ವಿನೂತನ ಕಾರ್ಯಕ್ರಮವನ್ನು ನಗರಾಭಿವೃದ್ಧಿ ಹಾಗೂ ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಬಸವರಾಜ್ ಚಾಲೆ ನೀಡಿದರು. ಇಂದು ಬೆಳಗ್ಗೆ ದಾವಣಗೆರೆ ನಗರದ ಗಾಂಧಿ ನಗರದಲ್ಲಿರುವ ಚೌಡೇಶ್ವರಿ ದೇವಾಲಯದ ಬಳಿ ಉದ್ಘಾಟಿಸಿದರು.

ಒಂದು ಲಕ್ಷ ಸಸಿಗಳನ್ನು ನೆಡುವ ಕಾರ್ಯಕ್ರಮಕ್ಕೆ ಸಸಿ ನೆಡುವ ಮೂಲಕ ದಾವಣಗೆರೆ ಸಂಸದರಾದ ಜಿ.ಎಂ.ಸಿದ್ದೇಶ್ವರ ಚಾಲನೆ ನೀಡಿದರು. ಜನನ/ ಮರಣ ಪ್ರಮಾಣಪತ್ರ ನೀಡುವ ಕಾರ್ಯಕ್ರಮಕ್ಕೆ ಶಾಸಕರಾದ ಎಸ್.ಎ.ರವೀಂದ್ರನಾಥ ಚಾಲನೆ ನೀಡಿದರು. ಮನೆ ಕಂದಾಯ ಸ್ವೀಕೃತಿ ಕಾರ್ಯಕ್ರಮಕ್ಕೆ ಶಾಸಕರಾದ ಶಾಮನೂರು ಶಿವಶಂಕರಪ್ಪ ಚಾಲನೆ ನೀಡಿದರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ದಾವಣಗೆರೆ ಮಹಾನಗರ ಪಾಲಿಕೆ ಮೇಯರ್ ಬಿ.ಜಿ.ಅಜಯ್ ಕುಮಾರ್ ವಹಿಸಿದ್ದರು. ಜಿಲ್ಲೆಯ ಶಾಸಕರು, ಮಹಾನಗರ ಪಾಲಿಕೆಯ ಸದಸ್ಯರು, ಅಧಿಕಾರಿಗಳು ಉಪಸ್ಥಿತರಿದ್ದರು. ಅಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸಲು ಹಾಗೂ ಜನ ಸ್ನೇಹಿ ಅಡಳಿತ ನೀಡುವ ಉದ್ದೇಶದಿಂದ ಸದಾ ಜನರ ಸೇವೆಯಲ್ಲಿ ಮಹಾನಗರ ಪಾಲಿಕೆ ಅಡಳಿತ ಎಂಬುದು ರಾಜ್ಯ ಸರ್ಕಾರದ ಧ್ಯೇಯೋದ್ದೇಶ ಆಗಿದೆ.

 


Spread the love

About Laxminews 24x7

Check Also

ಕ್ಯಾಂಟರ್-ಬೈಕ್ ಡಿಕ್ಕಿ: ಧಾರವಾಡ ಮೂಲದ ಯುವಕನ ದುರ್ಮರಣ

Spread the love ಕ್ಯಾಂಟರ್-ಬೈಕ್ ಡಿಕ್ಕಿ: ಧಾರವಾಡ ಮೂಲದ ಯುವಕನ ದುರ್ಮರಣ ಜಾಂಬೋಟಿ-ಚೋರ್ಲಾ ರಸ್ತೆಯ ಹಬ್ಬನಹಟ್ಟಿ ಕ್ರಾಸ್ ಬಳಿ ಇರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ