Breaking News

ಅತಿವೃಷ್ಟಿಗೆ ಮೆಕ್ಕೆಜೋಳ ಹಾಳು; ರೈತರು ಕಂಗಾಲು

Spread the love

ಶಿರಾಳಕೊಪ್ಪ: ಸತತ ಸುರಿಯುತ್ತಿರುವ ಮಳೆಯಿಂದಾಗಿ ತಾಳಗುಂದ ಮತ್ತು ಉಡುಗಣಿ ಹೋಬಳಿ ವ್ಯಾಪ್ತಿಯಲ್ಲಿ ಬೆಳೆಯಲಾಗಿರುವ ಮೆಕ್ಕೆಜೋಳ ಬೆಳೆ ಹಾಳಾಗಿದ್ದು, ರೈತರು ಕಂಗಲಾಗಿದ್ದಾರೆ.

ಈ ಭಾಗದಲ್ಲಿ ಪ್ರಸಕ್ತ ವರ್ಷ ವಾಡಿಕೆಗಿಂತ ಶೇ 33ರಷ್ಟು ಹೆಚ್ಚುವರಿ ಮಳೆ ಸುರಿದಿದೆ.

ಶಿರಾಳಕೊಪ್ಪ: ಅತಿವೃಷ್ಟಿಗೆ ಮೆಕ್ಕೆಜೋಳ ಹಾಳು; ರೈತರು ಕಂಗಾಲು

ಪ್ರಾಥಮಿಕ ವರದಿಯ ಪ್ರಕಾರ 1,350 ಹೆಕ್ಟೇರ್ ಮೆಕ್ಕೆಜೋಳದ ಬೆಳೆ ಹಾಳಾಗಿದ್ದು, ಅಂದಾಜು ₹ 4.23 ಕೋಟಿ ಮೊತ್ತದ ಬೆಳೆ ನಾಶವಾಗಿದೆ. ನಾಶವಾಗದೆ ಉಳಿದಿರುವ ಮೆಕ್ಕೆಜೋಳದ ಪೈರಿನ ಇಳುವರಿ ಕ್ಷೀಣಿಸುತ್ತಿದ್ದು, ಕೆಲವು ಕಡೆ ಕಂದು ಮತ್ತು ಕೆಂಪು ಬಣ್ಣಕ್ಕೆ ತಿರುಗಿದೆ. ಇನ್ನೂ ಸಾವಿರಾರು ಹೆಕ್ಟೇರ್ ಜೋಳದ ಬೆಳೆ ಕುಂಠಿತವಾಗಲಿದೆ ಎಂದು ರೈತರು ಚಿಂತಿತರಾಗಿದ್ದಾರೆ.

ತಾಳಗುಂದ 5,120 ಹೆಕ್ಟೇರ್, ಉಡುಗಣಿ 2,350 ಹೆಕ್ಟೇರ್, ಅಂಜನಾಪುರ 1,920 ಹೆಕ್ಟೇರ್, ಹೊಸೂರು 8,960 ಹೆಕ್ಟೇರ್, ಕಸಬಾ 1,150 ಹೆಕ್ಟೇರ್ ಸೇರಿದಂತೆ ತಾಲ್ಲೂಕಿನಲ್ಲಿ ಒಟ್ಟು 19,500 ಹೆಕ್ಟೇರ್ ಪ್ರದೇಶದಲ್ಲಿ ಮೆಕ್ಕೆಜೋಳ ಬಿತ್ತನೆ ಮಾಡಲಾಗಿದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ