ಸಾಗರ: ಇಲ್ಲಿನ ಜೋಗ ರಸ್ತೆಯ ಕೆಎಸ್‌ಆರ್‌ಟಿಸಿ ಡಿಪೋ ಸಮೀಪ ಮಂಗಳವಾರ ಚಲಿಸುತ್ತಿದ್ದ ಸಾರಿಗೆ ಸಂಸ್ಥೆ ಬಸ್‌ನಲ್ಲಿ ದಿಢೀರ್ ಬೆಂಕಿ ಕಾಣಿಸಿಕೊಂಡಿದೆ.
ಭಟ್ಕಳದಿಂದ ಬೆಂಗಳೂರಿಗೆ ಹೊರಟಿದ್ದ ಬಸ್‌ನಲ್ಲಿ ತಾಂತ್ರಿಕ ಸಮಸ್ಯೆಯಿಂದಾಗಿ ಬೆಂಕಿ ಕಾಣಿಸಿಕೊಂಡಿದೆ. ಚಾಲಕರು ಹಾಗೂ ನಿರ್ವಾಹಕರು ಬಸ್‌ನಿಂದ ಇಳಿದು ಪ್ರಯಾಣಿಕರನ್ನು ಬಸ್‌ನಿಂದ ಇಳಿಸಿದ್ದಾರೆ.
ಬಸ್‌ನಲ್ಲಿ 12 ಪ್ರಯಾಣಿಕರಿದ್ದು, ಯಾರಿಗೂ ಯಾವುದೇ ತೊಂದರೆ ಉಂಟಾಗಿಲ್ಲ. ಬಸ್‌ನ ಶೇ 50ರಷ್ಟು ಭಾಗ ಸುಟ್ಟು ಹೋಗಿದೆ.