Breaking News

ಟ್ರ್ಯಾಕ್ಟರ್ ಟ್ರೈಲರ್ ಕಳ್ಳನ ಬಂಧನ: ನಾಲ್ಕು ಟ್ರ್ಯಾಕ್ಟರ್ ಟ್ರೈಲರ್ ವಶ

Spread the love

ಬೈಲಹೊಂಗಲ: ಟ್ರ್ಯಾಕ್ಟರ್‌ ಟ್ರೈಲರ್ ಕಳವು ಮಾಡಿ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿ ₹5 ಲಕ್ಷ ಮೌಲ್ಯದ ನಾಲ್ಕು ಟ್ರ್ಯಾಕ್ಟರ್ ಟ್ರೈಲರ್ ಮತ್ತು ಕೃತ್ಯಕ್ಕೆ ಬಳಸಿದ ಒಂದು ಟ್ರ್ಯಾಕ್ಟರ್ ಎಂಜಿನ್‌ನ್ನು ಗುರುವಾರ ಪೊಲೀಸರು ಜಪ್ತಿ ಪಡಿಸಿಕೊಂಡಿದ್ದಾರೆ.

ಸವದತ್ತಿ ತಾಲ್ಲೂಕಿನ ಮರಕುಂಬಿ ಗ್ರಾಮದ ಅಡಿವೆಪ್ಪ ನಾಗಪ್ಪ ಕಳಸನ್ನವರ (34) ಬಂಧಿತ ಆರೋಪಿ.

ಟ್ರ್ಯಾಕ್ಟರ್ ಟ್ರೈಲರ್ ಕಳ್ಳನ ಬಂಧನ: ನಾಲ್ಕು ಟ್ರ್ಯಾಕ್ಟರ್ ಟ್ರೈಲರ್ ವಶ

ಈತ ತಾಲ್ಲೂಕಿನ ಸಾಣಿಕೊಪ್ಪ ಗ್ರಾಮದ ಹದ್ದಿಯಲ್ಲಿ ಟ್ರ್ಯಾಕ್ಟರ್ ಟ್ರೈಲರ್ ಕಳುವು ಮಾಡಿದ್ದ. ಈ ಕುರಿತು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.

ಕಳ್ಳನ ಪತ್ತೆಗೆ ಬೆಳಗಾವಿ ಎಸ್‌ಪಿ ಭೀಮಾಶಂಕರ ಗುಳೇದ ಮಾರ್ಗದರ್ಶನದಲ್ಲಿ ಹೆಚ್ಚುವರಿ ಎಸ್.ಪಿ.ಗಳಾದ ಶ್ರುತಿ ಕೆ, ಆರ್.ಬಿ.ಬಸರಗಿ, ಡಿವೈಎಸ್ಪಿ ರವಿ ನಾಯ್ಕ, ಪಿಐ ಪಂಚಾಕ್ಷರಿ ಸಾಲಿಮಠ ನೇತೃತ್ವದಲ್ಲಿ ತಂಡ ರಚಿಸಲಾಗಿತ್ತು.

ಬೈಲಹೊಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ರಾಜ್ಯದಲ್ಲಿರುವ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆಗೆ ಆಪರೇಷನ್ ಆರಂಭ

Spread the loveಬೆಂಗಳೂರು: ಬಾಂಗ್ಲಾ ದೇಶೀಯರು ಸೇರಿದಂತೆ ರಾಜ್ಯದಲ್ಲಿ ಅಕ್ರಮವಾಗಿ ನೆಲೆಸಿರು ವವರನ್ನು ಪತ್ತೆ ಹಚ್ಚಿ, ಗಡೀಪಾರು ಮಾಡುವ ಕಾರ್ಯಾಚರಣೆಯನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ