Breaking News

ಸ್ವಾತಂತ್ರ್ಯ ದಿನ: ಪ್ರಧಾನಿಯೊಂದಿಗೆ ಭಾಗವಹಿಸಲು ವಿದ್ಯಾರ್ಥಿ ಸಾಗರ ಆಯ್ಕೆ

Spread the love

ಚಿಕ್ಕೋಡಿ: ತಾಲ್ಲೂಕಿನ ಕೇರೂರ ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ಕಲಾ ವಿಭಾಗದ ವಿದ್ಯಾರ್ಥಿ ಸಾಗರ ಮಲ್ಲಪ್ಪ ಬೆಕ್ಕೇರಿ 77ನೇ ಸ್ವಾತಂತ್ರ್ಯ ಮಹೋತ್ಸವ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಅತಿಥಿಯಾಗಿ ಭಾಗವಹಿಸಲು ಆಯ್ಕೆಯಾಗಿದ್ದಾರೆ.

ಇಡೀ ರಾಜ್ಯದಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆ ವತಿಯಿಂದ ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಯ್ಕೆಯಾದ 6 ಜನ ವಿದ್ಯಾರ್ಥಿಗಳ ಪೈಕಿ ಸಾಗರ ಬೆಕ್ಕೇರಿ ಅವರು ಒಬ್ಬರಾಗಿದ್ದಾರೆ.

ಆಜಾದಿ ಕಾ ಅಮೃತ ಮಹೋತ್ಸವ ಕಾರ್ಯಕ್ರಮದ ಅಂಗವಾಗಿ ‘ಮೇರಿ ಮಿಟ್ಟಿ ಮೇರಾ ದೇಶ’ ಕಾರ್ಯಕ್ರಮದಲ್ಲಿ ಅಮೃತ ವಾಟಿಕಾ ನಿರ್ಮಾಣ ಮಾಡಿದ್ದಕ್ಕಾಗಿ ಕಾರ್ಯಕ್ರಮದ ಅಧಿಕಾರಿ ಶ್ರೀಶೈಲ ಕೋಲಾರ ಅವರ ಮಾರ್ಗದರ್ಶನದಲ್ಲಿ ಎನ್‌ಎಸ್‌ಎಸ್ ಘಟಕದ ವಿದ್ಯಾರ್ಥಿ ಸಾಗರ ಬೆಕ್ಕೇರಿ ಆಯ್ಕೆಯಾಗಿದ್ದಾರೆ.


Spread the love

About Laxminews 24x7

Check Also

ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು

Spread the love ಬೆಳಗಾವಿ: ಡಾ.ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು. ಹೀಗಾಗಿ, ಅವರ ಕೃತಿಗಳಲ್ಲಿ ಸ್ತ್ರೀತ್ವದ ಅಂಶಗಳು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ