ಬೈಲಹೊಂಗಲ: ತಾಲ್ಲೂಕಿನ ಉಡಿಕೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಒಳಪಡುವ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶಿಂಧೆ ಭೇಟಿ ನೀಡಿ, ಪರಿಶೀಲಿಸಿದರು.
‘ಗ್ರಾಮೀಣ ಪ್ರದೇಶಗಳಲ್ಲಿ ಹಲವಾರು ಸಾಂಕ್ರಾಮಿಕ ಕಾಯಿಲೆಗಳು ಉದ್ಭವಿಸುತ್ತಿದ್ದು, ರೋಗಿಗಳ ಆರೋಗ್ಯವಂತರನ್ನಾಗಿ ಮಾಡುವಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿ ಕೈಜೊಡಿಸಬೇಕು’ ಎಂದು ಸೂಚಿಸಿದರು.
ಔಷಧಿ ಕೊಠಡಿ ನಿರ್ವಹಣೆ, ವಿತರಣೆ ಕುರಿತು ಮಾಹಿತಿ ಪಡೆದರು. ಕೆಂಗಾನೂರ ಗ್ರಾಮ ಪಂಚಾಯಿತಿಗೆ ಭೇಟಿ ನೀಡಿ ಡಿಜಿಟಲ್ ಗ್ರಂಥಾಲಯ ವೀಕ್ಷಣೆ ಮಾಡಿ. ಕಂಪ್ಯೂಟರ್ ಕೇಂದ್ರಗಳನ್ನು ಪರಿಶೀಲನೆ ಮಾಡಿದರು.
ಕಾರ್ಯನಿರ್ವಾಹಕ ಅಧಿಕಾರಿ ಸುಭಾಸ ಸಂಪಗಾಂವಿ, ಆರೋಗ್ಯಾಧಿಕಾರಿ ಡಾ.ಸಂಜಯ ಸಿದ್ದಣ್ಣವರ, ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಕಿರಣ ಘೋರ್ಪಡೆ, ಕ್ಷೇತ್ರ ಶಿಕ್ಷಣಾಧಿಕಾರಿ ಎ.ಎನ್.ಪ್ಯಾಟಿ, ಸಹಾಯಕ ನಿರ್ದೇಶಕರಾದ ವಿಜಯ ಪಾಟೀಲ, ರಘು ಬಿ.ಎನ್., ಪ್ರಕಾಶ ಮೇಳವಂಕಿ, ಪಿಡಿಒ ಮೇಘನಾ ಶೇಟ್ಟಿ, ಗ್ರಾಮ ಪಂಚಾಯಿತಿ ಅಧ್ಯಕ್ಷ ಯಲ್ಲಪ್ಪ ಹುಲಗಣ್ಣವರ, ತಾಲ್ಲೂಕು ಪಂಚಾಯಿತಿ ಐಇಸಿ ಸಂಯೋಜಕ ಎಸ್.ವಿ.ಹಿರೇಮಠ ಮತ್ತು ಆರೋಗ್ಯ ಇಲಾಖೆ, ಗ್ರಾಪಂ ಸಿಬ್ಬಂದಿ ಇದ್ದರು.