ಬೆಂಗಳೂರು, : ಗಂಡನನ್ನು ಬಿಟ್ಟು ಬಾಳು ಕಟ್ಟಿಕೊಂಡಿದ್ದ ಮಹಿಳೆಗೆ ಕಾರು ಚಾಲಕನೋರ್ವ ಬಾಳು ಕೊಡ್ತೀನಿ ಎಂದು ನಂಬಿಸಿ ಮೋಸ (Cheating) ಮಾಡಿರುವ ಘಟನೆ ಬೆಂಗಳೂರಿನಲ್ಲಿ (Bengaluru) ನಡೆಸಿದೆ.
ಕ್ಯಾಬ್ ಚಾಲಕ ಪ್ರಜ್ವಲ್ ಎಂಬಾತ ವಿವಾಹಿತ ಮಹಿಳೆಗೆ ಬಾಳು ಕೊಡ್ತೀನಿ ಎಂದು ನಂಬಿಸಿ ಆಕೆಯ ಜೊತೆ ಕೆಲ ದಿನಗಳ ಕಾಲ ಒಟ್ಟಿಗೆ ಜೀವನ ನಡೆಸಿ ಆಕೆಯನ್ನು ಬಳಸಿಕೊಂಡು ಇದೀಗ ಬೋರಾದ್ಳು ಎಂದು ಬಿಟ್ಟು ಹೋಗಿದ್ದಾನೆ. ಘಟನೆ ಸಂಬಂಧ ಮಹಿಳೆ ಕೆಂಗೇರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು ನ್ಯಾಯಕ್ಕಾಗಿ ಅಂಗಲಾಚಿದ್ದಾಳೆ.