Breaking News

ಜನವರಿ ಮೂರನೇ ವಾರದಿಂದ ಆರಂಭಗೊಳ್ಳಲಿದೆ ಕನ್ನಡದ ಬಿಗ್‍ಬಾಸ್

Spread the love

ಬೆಂಗಳೂರು: ಕನ್ನಡದ ಬಿಗ್‍ಬಾಸ್ ಜನವರಿ ಮೂರನೇ ವಾರದಿಂದ ಆರಂಭಗೊಳ್ಳಲಿದೆ ಎಂಬುದರ ಬಗ್ಗೆ ಮಾಹಿತಿ ಲಭ್ಯವಾಗಿದೆ. ಪ್ರತಿ ವರ್ಷ ಅಕ್ಟೋಬರ್ ನಲ್ಲಿ ಬಿಗ್‍ಬಾಸ್ ಆರಂಭವಾಗುತ್ತಿತ್ತು. ಕೊರೊನಾ ಹಿನ್ನೆಲೆ ಬಿಗ್‍ಬಾಸ್ ಮುಂದೂಡಿಕೆ ಮಾಡಲಾಗಿತ್ತು.

ಬಿಗ್‍ಬಾಸ್ ಪ್ರಸಾರವಾಗುವ ವಾಹಿನಿಯ ಬ್ಯುಸಿನೆಸ್ ಹೆಡ್ ಪರಮೇಶ್ವರ್ ಗುಂಡ್ಕಲ್ ಜೊತೆ ನಟ ಕಿಚ್ಚ ಸುದೀಪ್ ಮಾತುಕತೆ ನಡೆಸುತ್ತಿರುವ ಫೋಟೋಗಳು ವೈರಲ್ ಆಗುತ್ತಿವೆ. ಈ ಬಾರಿ ಬಿಗ್‍ಬಾಸ್ ಮನೆಗೆ ಪ್ರವೇಶ ಪಡೆಯುವ 15 ಸ್ಪರ್ಧಿಗಳ ಹೆಸರು ಅಂತಿಮವಾಗಿದೆ ಎನ್ನಲಾಗಿದೆ.

ಕೊರೊನಾ ಆತಂಕದ ನಡುವೆಯೂ ಹಿಂದಿ, ತೆಲಗು, ತಮಿಳು ಭಾಷೆಯ ಬಿಗ್‍ಬಾಸ್ ಆರಂಭಗೊಂಡಿವೆ. ಇದೀಗ ಕನ್ನಡದ ಬಿಗ್‍ಬಾಸ್ ಆರಂಭದ ಸಿದ್ಧತೆಗಳು ಸಹ ಶುರುವಾಗಿದ್ದು, ಈ ಬಾರಿ ಬಿಗ್ ಮನೆ ಯಾರು ಪ್ರವೇಶಿಸುತ್ತಾರೆ ಎಂಬುದರ ಬಗ್ಗೆ ಕುತೂಹಲ ಮನೆ ಮಾಡಿದೆ.


Spread the love

About Laxminews 24x7

Check Also

ಮೂರು ಮಕ್ಕಳ ತಾಯಿಯನ್ನು ಕತ್ತು ಸೀಳಿ ಕೊಂದ ಪ್ರಿಯಕರ

Spread the loveದಾವಣಗೆರೆ: ವ್ಯಕ್ತಿಯೊಬ್ಬ ಪ್ರಿಯತಮೆಯ ಕತ್ತು ಸೀಳಿ ಹತ್ಯೆಗೈದ  ಘಟನೆ ದಾವಣಗೆರೆಯ  ಶೇಖರಪ್ಪ ನಗರದಲ್ಲಿ ನಡೆದಿದೆ. ನಾಗರತ್ನ (45) …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ