Breaking News

ಕಟ್ಟಡ ನಿರ್ಮಾಣ ವೇಳೆ ಸೆಂಟ್ರಿಂಗ್​ ಕುಸಿತ ಯಾದಗಿರಿ ಮೂಲದಕಾರ್ಮಿಕ ಸಾವು

Spread the love

ಬೆಂಗಳೂರು, ಆಗಸ್ಟ್​ 10: ಕಟ್ಟಡ ನಿರ್ಮಾಣ ವೇಳೆ ಸೆಂಟ್ರಿಂಗ್​ ಕುಸಿದು (Centering collapsed) ಮೂವರು ಕಾರ್ಮಿಕರ ಪೈಕಿ ಇಬ್ಬರು ಸಾವನ್ನಪ್ಪಿರುವಂತಹ (death) ಘಟನೆ ಬೆಂಗಳೂರಿನ ಪೀಣ್ಯದ ಎನ್​ಟಿಟಿಎಫ್ ರಸ್ತೆಯಲ್ಲಿ ನಡೆದಿದೆ. ದುರಂತದಲ್ಲಿ ಕಾರ್ಮಿಕ ಹಿಮಾಂಶು (28), ಆಸ್ಪತ್ರೆಗೆ ಸಾಗಿಸುವಾಗ ಪ್ರಕಾಶ್ ಮೃತಪಟ್ಟಿದ್ದು, ಮತ್ತೋರ್ವನ ಸ್ಥಿತಿ ಗಂಭೀರವಾಗಿದೆ.

ಸ್ಥಳೀಯ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಘಟನಾ ಸ್ಥಳಕ್ಕೆ ಪೀಣ್ಯ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ಬೆಂಗಳೂರು: ಕಟ್ಟಡ ನಿರ್ಮಾಣ ವೇಳೆ ಸೆಂಟ್ರಿಂಗ್​ ಕುಸಿತ: ಮೂವರ ಪೈಕಿ ಇಬ್ಬರು ಕಾರ್ಮಿಕರು ಸಾವು

ಸೆಂಟ್ರಿಂಗ್ ಹಾಕಿ ಆರ್​.ಸಿ.ಸಿ ಹಾಕುವ ಕೆಲಸ ನಡೆಯುತಿತ್ತು. ಈ ವೇಳೆ ಅವಘಡ ಸಂಭವಿಸಿದೆ. ಐದನೇ ಅಂತಸ್ತಿನಲ್ಲಿ ಕಟ್ಟಡ‌ ಕಾಮಗಾರಿ ಕೆಲಸ ನಡೆಯುತಿತ್ತು. ಈ ಸಂದರ್ಭದಲ್ಲಿ ನಿರ್ಮಾಣ ಮಾಡುತ್ತಿದ್ದ ಸೆಂಟ್ರಿಂಗ್ ಕುಸಿದಿದೆ. ಐದನೇ ಮಹಡಿಯಿಂದ ಕಾರ್ಮಿಕ ಹಿಮಾಂಶು ಬಿದ್ದು ಸಾವನ್ನಪ್ಪಿದ್ದಾರೆ. ಮೃತ ಕಾರ್ಮಿಕ ಯಾದಗಿರಿ ಮೂಲದವನು.


Spread the love

About Laxminews 24x7

Check Also

ಅಡಿಕೆ ಸಾಗಿಸುತ್ತಿದ್ದ VRL ಲಾರಿ ತೋಟಕ್ಕೆ ಉರುಳಿ ಸಂಪೂರ್ಣ ಜಖಂ!

Spread the loveಶಿರಸಿ:ಶಿರಸಿಯಿಂದ ಹುಬ್ಬಳ್ಳಿಗೆ ಅಡಿಕೆ ಸಾಗಿಸುತ್ತಿದ್ದ VRL ಸಂಸ್ಥೆಗೆ ಸೇರಿದ ಲಾರಿಯೊಂದು ಚಾಲಕನ ಅಜಾಗರೂಕತೆಯಿಂದ ನಿಯಂತ್ರಣ ಕಳೆದುಕೊಂಡು ರಸ್ತೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ