Breaking News

ಮದ್ಯ ಸೇವನೆ ಮಾಡಲು 500 ರೂ. ಕೊಟ್ಟಿಲ್ಲವೆಂದು ಪತ್ನಿಯನ್ನು ಬರ್ಬರವಾಗಿ ಕೊಲೆಗೈದ ಆರೋಪಿ ಇದೀಗ ಆತ್ಮಹತ್ಯೆಗೆ ಶರಣಾಗಿದ್ದಾನೆ.

Spread the love

ಚಿಕ್ಕಬಳ್ಳಾಪುರ: ಮದ್ಯ ಸೇವನೆ ಮಾಡಲು 500 ರೂ. ಕೊಟ್ಟಿಲ್ಲವೆಂದು ಪತ್ನಿಯನ್ನು ಬರ್ಬರವಾಗಿ ಕೊಲೆಗೈದ ಆರೋಪಿ ಇದೀಗ ಆತ್ಮಹತ್ಯೆಗೆ ಶರಣಾಗಿದ್ದಾನೆ.ಆದಿನಾರಾಯಣಪ್ಪ ಆತ್ಮಹತ್ಯೆಗೆ ಶರಣಾದವ.

ಈತ ಮೂರು ದಿನಗಳ ಹಿಂದೆಯಷ್ಟೇ ಪತ್ನಿ ರತ್ನಮ್ಮ(35)ನನ್ನು ಒನಕೆಯಿಂದ ಹೊಡೆದು ಹತ್ಯೆ ಮಾಡಿದ್ದನು. ಬಳಿಕ ಸ್ಥಳದಿಂದ ಪರಾರಿಯಾಗಿದ್ದನು. ಇದೀಗ ತಾನು ಮಾಡಿದ ತಪ್ಪಿಗೆ ಪ್ರಾಯಶ್ಚಿತಕ್ಕೋ ಏನೋ ಕೆರೆಗೆ ಹಾರಿ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಇದೀಗ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಭದ್ರಂಪಲ್ಲಿ ಗ್ರಾಮದ ಹೊರವಲಯದಲ್ಲಿರುವ ಕೆರೆಯಲ್ಲಿ ಶವವಾಗಿ ಪತ್ತೆಯಾಗಿದ್ದಾನೆ. ಶವ ಕೆರೆಯಲ್ಲಿ ತೇಲಿ ಬರುತ್ತಿರುವುದನ್ನು ನೋಡಿದ ಸ್ಥಳೀಯರು, ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಕೆರೆಯಿಂದ ಶವವನ್ನು ಮೇಲಕ್ಕೆತ್ತಿದ್ದಾರೆ. ನಂತರ ಸಂಬಂಧಿಕರಿಗೆ ಒಪ್ಪಿಸಿದ್ದಾರೆ.

ಕೂಲಿ ಕೆಲಸ ಮಾಡಿಕೊಂಡಿದ್ದ ಆದಿನಾರಾಯಣಪ್ಪ ಮೂರು ದಿನಗಳ ಹಿಂದೆ ಬೆಳಗ್ಗೆ ಪತ್ನಿಗೆ 500 ರೂಪಾಯಿ ನೀಡಿದ್ದನು. ಮಧ್ಯಾಹ್ನ ವೇಳೆ ಕಂಠಪೂರ್ತಿ ಕುಡಿದು ಬಂದ ಆದಿನಾರಾಯಣಪ್ಪ ತಾನು ನೀಡಿದ ಹಣ ಹಿಂದಿರುಗಿಸುವಂತೆ ಕೇಳಿದ್ದಾನೆ. ರತ್ಮಮ್ಮ ಹಣ ನೀಡಲು ಒಪ್ಪದಿದ್ದಾಗ ಮನೆಯಲ್ಲಿದ್ದ ಒನಕೆಯಿಂದ ಹೊಡೆದು ಕೊಲೆ ಮಾಡಿದ್ದಾನೆ. ದಂಪತಿಗೆ ಮೂರು ಮಕ್ಕಳು ಇದ್ದು, ಇದೀಗ ಅವು ಅನಾಥವಾಗಿವೆ.


Spread the love

About Laxminews 24x7

Check Also

ಮೂರು ಮಕ್ಕಳ ತಾಯಿಯನ್ನು ಕತ್ತು ಸೀಳಿ ಕೊಂದ ಪ್ರಿಯಕರ

Spread the loveದಾವಣಗೆರೆ: ವ್ಯಕ್ತಿಯೊಬ್ಬ ಪ್ರಿಯತಮೆಯ ಕತ್ತು ಸೀಳಿ ಹತ್ಯೆಗೈದ  ಘಟನೆ ದಾವಣಗೆರೆಯ  ಶೇಖರಪ್ಪ ನಗರದಲ್ಲಿ ನಡೆದಿದೆ. ನಾಗರತ್ನ (45) …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ