ಬೆಳಗಾವಿ: ಯಡಿಯೂರಪ್ಪ ಮಾರ್ಗಕ್ಕೆ ಹೊಂದಿಕೊಂಡ ರಾಷ್ಟ್ರೀಯ ಹೆದ್ದಾರಿಯಲ್ಲಿ ಶನಿವಾರ ಬೆಳಿಗ್ಗೆ ಗೂಡ್ಸ್ ಆಟೊ ಹಾಗೂ ಲಾರಿ ಮಧ್ಯೆ ಡಿಕ್ಕಿ ಸಂಭವಿಸಿ, ಆಟೊ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಬೆಳಗಾವಿ ತಾಲ್ಲೂಕಿನ ಹಿರೇಬಾಗೇವಾಡಿ ಗ್ರಾಮದ ಅಮಿನ್ ಯರಗಟ್ಟಿ (45) ಮೃತ ವ್ಯಕ್ತಿ.
ಆಟೊದಲ್ಲಿ ತರಕಾರಿ ತುಂಬಿಕೊಂಡು ಬೆಳಗಾವಿ ನಗರಕ್ಕೆ ಬರುತ್ತಿದ್ದಾಗ ಲಾರಿ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಕೆಳಗಡೆ ಬಿದ್ದ ಆಟೊ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದರು.
ಲಾರಿ ಕೂಡ ರಸ್ತೆ ಪಕ್ಕಕ್ಕೆ ಉರುಳಿಬಿದ್ದಿದೆ. ಲಾರಿ ಚಾಲಕ ಪರಾರಿಯಾಗಿದ್ದಾನೆ.
ಸ್ಥಳಕ್ಕೆ ಹಿರೇಬಾಗೆವಾಡಿ ಪೊಲೀಸರ ಭೇಟಿ ನೀಡಿದರು.
Laxmi News 24×7