ಬೆಳಗಾವಿ: ಜಿಲ್ಲೆಯ ಅಂಗನವಾಡಿ ಕೇಂದ್ರಗಳಿಗೆ ಈ ವರ್ಷ 197 ಕಾರ್ಯಕರ್ತೆಯರು ನೇಮಕಗೊಂಡಿದ್ದಾರೆ. ಅವರಲ್ಲಿ 15 ಮಂದಿ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿದ್ದಾರೆ.
50 ಲಕ್ಷಕ್ಕೂ ಅಧಿಕ ಜನಸಂಖ್ಯೆ ಹೊಂದಿದ ಬೆಳಗಾವಿ ಜಿಲ್ಲೆಯಲ್ಲಿ 5,656 ಅಂಗನವಾಡಿ ಕೇಂದ್ರಗಳಿವೆ.
1,200ಕ್ಕೂ ಅಧಿಕ ಕೇಂದ್ರಗಳಲ್ಲಿ ಕನ್ನಡ ಮತ್ತು ಇಂಗ್ಲಿಷ್ ಮಾಧ್ಯಮಗಳಲ್ಲಿ ಎಲ್‌ಕೆಜಿ, ಯುಕೆಜಿ ತರಗತಿ ಆರಂಭಿಸಲು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಿದ್ಧತೆ ನಡೆಸಿದೆ.
ಜಿಲ್ಲೆಯಲ್ಲಿ 283 ಅಂಗನವಾಡಿ ಕಾರ್ಯಕರ್ತೆಯರ ನೇಮಕಕ್ಕೆ 2023ರ ಜೂನ್‌ನಲ್ಲಿ ಸರ್ಕಾರ ಅಧಿಸೂಚನೆ ಹೊರಡಿಸಿತ್ತು. 2024ರ ಜೂನ್‌ನಲ್ಲಿ 197 ಕಾರ್ಯಕರ್ತೆಯರನ್ನು ಆಯ್ಕೆ ಮಾಡಿ, ನೇಮಕಾತಿ ಆದೇಶ ಕೊಡಲಾಗಿದೆ.