Breaking News

6.92 ಕೋಟಿ ವೆಚ್ಚದಲ್ಲಿ ವಾಣಿಜ್ಯ ಮಳಿಗೆ: ಶಾಸಕ ಬಾಲಚಂದ್ರ ಜಾರಕಿಹೊಳಿ

Spread the love

ಮೂಡಲಗಿ: ‘ಮೂಡಲಗಿ ಪಟ್ಟಣದಲ್ಲಿ ಪುರಸಭೆಯಿಂದ ₹6.92 ಕೋಟಿ ವೆಚ್ಚದಲ್ಲಿ ಅತ್ಯಾಧುನಿಕವಾದ ವಾಣಿಜ್ಯ ಮಳಿಗೆಯನ್ನು ನಿರ್ಮಿಸಲಾಗುವುದು’ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು.

ಇಲ್ಲಿನ ಪುರಸಭೆಗೆ ಭೇಟಿ ನೀಡಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ‘ಐಡಿಎಸ್‌ಎಂಟಿ ಯೋಜನೆ ಅಡಿಯಲ್ಲಿ ಮಳಿಗೆಯನ್ನು ನಿರ್ಮಿಸಲಿದ್ದು, ಇದು ಬಹು ಮಹಡಿ ಕಟ್ಟಡವನ್ನು ಹೊಂದಿರಲಿದೆ.

ನೆಲ ಮಾಳಿಗೆಯಲ್ಲಿ (ಬೆಸ್ ಮೆಂಟ್) ವಾಹನಗಳ ಪಾರ್ಕಿಂಗ್, ನೆಲ ಮಹಡಿಯಲ್ಲಿ 51 ಮತ್ತು ಮೊದಲ ಮಹಡಿಯಲ್ಲಿ 17 ಅಂಗಡಿಗಳು ಸೇರಿದಂತೆ ಒಟ್ಟು 68 ಅಂಗಡಿಗಳ ಕಟ್ಟಡವನ್ನು ನಿರ್ಮಿಸಲಾಗುತ್ತಿದೆ’ ಎಂದು ತಿಳಿಸಿದರು.

‘ಮೂಡಲಗಿ ಪಟ್ಟಣದ ಅಭಿವೃದ್ಧಿಗಾಗಿ ಅನೇಕ ಹೊಸ ಹೊಸ ಯೋಜನೆಗಳನ್ನು ಕಾರ್ಯಗತ ಮಾಡಲಾಗುತ್ತಿದೆ. ಆದರೆ ಈಗಿರುವ ಕಾಂಗ್ರೆಸ್ ಸರ್ಕಾರವು ಯಾವುದೇ ತೆರನಾದ ಅನುದಾನ ನೀಡುತ್ತಿಲ್ಲ. ಹೀಗಾಗಿ ಅಭಿವೃದ್ಧಿ ಕಾರ್ಯಗಳು ನಿಧಾನ ಗತಿಯಲ್ಲಿ ನಡೆಯುತ್ತಿವೆ’ ಎಂದು ಅವರು ಬೇಸರ ವ್ಯಕ್ತಪಡಿಸಿದರು.


Spread the love

About Laxminews 24x7

Check Also

ಹುದಲಿ ಹಾಗೂ ಸುತ್ತಮುತ್ತಲಿನ ಗ್ರಾಮಗಳ ವಿದ್ಯಾರ್ಥಿಗಳ ವಿದ್ಯಾಭ್ಯಾಸದ ಹಾದಿಯಲ್ಲಿ ಹೊಸ ಬೆಳಕು!

Spread the love ಹುದಲಿ ಹಾಗೂ ಸುತ್ತಮುತ್ತಲಿನ ಗ್ರಾಮಗಳ ವಿದ್ಯಾರ್ಥಿಗಳ ವಿದ್ಯಾಭ್ಯಾಸದ ಹಾದಿಯಲ್ಲಿ ಹೊಸ ಬೆಳಕು! ಯಮಕನಮರಡಿ ವಿಧಾನಸಭಾ ಕ್ಷೇತ್ರದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ