ಬೆಳಗಾವಿ: ಬಿಜೆಪಿ ಪಾದಯಾತ್ರೆ ಮುಗಿದ ಬೆನ್ನಲ್ಲೇ ಪಕ್ಷದಲ್ಲಿ ಮತ್ತೆ ಬಂಡಾಯ ಚಟುವಟಿಕೆಗಳು ಆರಂಭವಾಗಿದೆ. ಬೆಳಗಾವಿ ಹೊರವಲಯದ ಖಾಸಗಿ ರೆಸಾರ್ಟ್ ನಲ್ಲಿ ಪ್ರಭಾವಿ ನಾಯಕರಾದ ರಮೇಶ್ ಜಾರಕಿಹೊಳಿ (Ramesh jarkiholi) ಮತ್ತು ಬಸನಗೌಡ ಪಾಟೀಲ ಯತ್ನಾಳ (Basanagouda Patil Yatnal) ನೇತೃತ್ವದಲ್ಲಿ ಬಿಜೆಪಿ ಅತೃಪ್ತ ಶಾಸಕರು ಹಾಗೂ ನಾಯಕರ ಸಭೆ ನಡೆಸುತ್ತಿದ್ದಾರೆ.
ಜಾರಕಿಹೊಳಿ, ಯತ್ನಾಳ್ ಗೆ ಹಲವ ಮುಖಂಡರು ಸಾಥ್ ನೀಡಿದ್ದಾರೆ. ಪ್ರತಾಪ್ ಸಿಂಹ, ಕುಮಾರ್ ಬಂಗಾರಪ್ಪ, ಅಣ್ಣಸಾಹೆಬ್ ಜೊಲ್ಲೆ, ಬಿ.ಬಿ ನಾಯಕ್ ಸೇರಿ ಹಲವು ಮುಖಂಡರು ಸಭೆಯಲ್ಲಿ ಭಾಗಿಯಾಗಿದ್ದಾರೆ.
ಅಚ್ಚರಿಯ ಬೆಳವಣಿಗೆ ಎನ್ನುವಂತೆ ರಮೇಶ್ ಜಾರಕಿಹೊಳಿ ಹಾಗೂ ಮಾಜಿ ಸಂಸದ ಅಣ್ಣಾಸಾಹೇಬ ಜೊಲ್ಲೆ ಮತ್ತೆ ಒಂದಾಗಿದ್ದಾರೆ.
ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ವಿರುದ್ಧ ಮುನಿಸಿಕೊಂಡಿರುವ ನಾಯಕರು ಒಟ್ಟಾಗಿ ಸಭೆ ನಡೆಸುತ್ತಿರುವುದು ಕುತೂಹಲಕ್ಕೆ ಕಾರಣವಾಗಿದೆ.