Breaking News

ಕಾಡು ಪ್ರಾಣಿಗಳ ಬೇಟೆಯಾಡಲು ಬಂದ ಯುವಕ ಸ್ಫೋಟಕ ಸಿಡಿದು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ

Spread the love

ಬೆಳಗಾವಿ : ಕಾಡು ಪ್ರಾಣಿಗಳ ಬೇಟೆಯಾಡಲು ಬಂದ ಯುವಕನೇ  ತಾನು ತಂದಿದ್ದ ಸ್ಫೋಟಕ ಸಿಡಿದು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಜಿಲ್ಲೆಯ ಖಾನಾಪುರ ತಾಲ್ಲೂಕಿನ ಮಾಚಿಗಡ ಗ್ರಾಮದ ಅರಣ್ಯ ಪ್ರದೇಶದಲ್ಲಿ ನಡೆದಿದೆ.

ಶಿವಮೊಗ್ಗ ಮೂಲದ  ಗಜೇಂದ್ರ ರಜಪೂತ (17)ಮೃತ ಯುವಕ.

ದ್ವಿಚಕ್ರದಲ್ಲಿ ಗಜೇಂದ್ರ ಹಾಗೂ ಶಿವಕುಮಾರ್ ಇಬ್ಬರು ಪ್ರಾಣಿಗಳ ಭೇಟೆಯಾಡಲು ಬಂದಿದ್ದರು. ಗಜೇಂದ್ರ ತಾನು ತಂದಿದ್ದ ಸ್ಫೋಟಕ ವಸ್ತುಗಳನ್ನು ಬ್ಯಾಗ್ ನಲ್ಲಿ ಇಟ್ಟುಕೊಂಡಿದ್ದನು.  ಅಲ್ಲಿಗೆ ಬಂದ ವೇಳೆ ಬೈಕಿಗೆ ಟ್ಯಾಕ್ಟರ್ ಡಿಕ್ಕಿ ಹೊಡೆದಿದೆ.

ಇದರಿಂದ ಬೈಕ್ ಸವಾರರಿಬ್ಬರು ನೆಲಕ್ಕೆ ಬಿದ್ದಿದ್ದಾರೆ. ಈ ವೇಳೆ  ಬ್ಯಾಗ್ ನಲ್ಲಿದ್ದ ಸ್ಫೋಟಕ ವಸ್ತುಗಳು ಸ್ಪೋಟಗೊಂಡಿದ್ದು, ಗಜೇಂದ್ರ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಶಿವಕುಮಾರ್ ಪ್ರಾಣಾಪಾಯದಿಂದ ಪಾರಾಗಿದ್ದಾನೆ.

ಸ್ಥಳಕ್ಕೆ ನಂದಗಡ ಠಾಣೆ ಪೊಲೀಸರು  ಭೇಟಿ ನೀಡಿ, ಪರಿಶೀಲನೆ ನಡೆಸುತ್ತಿದ್ದಾರೆ.


Spread the love

About Laxminews 24x7

Check Also

ಮೊಬೈಲ್ ಬ್ಯಾನ್ ನಿರ್ಧಾರ ಸರಿಯಲ್ಲ: ಮಾ 12ರಂದು ಕನ್ನಡ ಶಾಲೆಗಳ ಬಂದ್​​ಗೆ ವಾಟಾಳ್​ ನಾಗರಾಜ್​ ಕರೆ ​

Spread the loveಮೈಸೂರು: ರಾಜ್ಯದಲ್ಲಿ 16 ವರ್ಷದೊಳಗಿನ ಮಕ್ಕಳು ಸಾಮಾಜಿಕ ಜಾಲತಾಣ ಬಳಸುವುದನ್ನು ನಿಷೇಧಿಸಲಾಗಿದೆ. ತಮ್ಮ 17ನೇ ದಾಖಲೆಯ ಬಜೆಟ್​ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ