ಮಂಡ್ಯ: ಕೇಂದ್ರ ಬೃಹತ್ ಕೈಗಾರಿಕೆ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು, ಇಂದು ಮಧ್ಯಾಹ್ನ ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಸೀತಾಪುರ ಗ್ರಾಮದ ರೈತ ಲಕ್ಷ್ಮಣ ಅವರ ಗದ್ದೆಯಲ್ಲಿ ಭತ್ತ ನಾಟಿ ಮಾಡಿದರು.
ಈ ಕುರಿತ ಚಿತ್ರಗಳನ್ನು ಅವರು ಎಕ್ಸ್ ಖಾತೆಯಲ್ಲಿ ಟ್ವೀಟ್ ಮಾಡಿದ್ದಾರೆ.

ಭೂಮಿ ತಾಯಿ ಮಕ್ಕಳಾದ ನಮ್ಮೆಲ್ಲರಿಗೂ ಭೂಮಿಯೇ ಸರ್ವಸ್ವ. ಬೇಸಾಯವೇ ಬದುಕು. ಭತ್ತದ ನಾಟಿ ನನ್ನ ಮನೆಯ ಕಾರ್ಯಕ್ರಮವೇ ಆಗಿತ್ತು. ರೈತಾಪಿ ಜನರೊಂದಿಗೆ ಇಂತಹ ಸಾರ್ಥಕ, ಅನನ್ಯ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದು ನನ್ನಲ್ಲಿ ಧನ್ಯತೆಯ ಭಾವ ಉಂಟು ಮಾಡಿದೆ ಎಂದು ಹೇಳಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ದೇಶದ ಸಮಸ್ತ ಅನ್ನದಾತರಿಗೆ ಹೆಗಲು ಕೊಡುವ ಅನೇಕ ಕಾರ್ಯಕ್ರಮಗಳನ್ನು ಕೇಂದ್ರ ಸರಕಾರ ಜಾರಿಗೆ ತಂದಿದೆ ಎಂದು ಅವರು ಹೇಳಿದ್ದಾರೆ.
Laxmi News 24×7