ಬೆಂಗಳೂರು: ಈ ಬಾರಿಯ ವಿಶ್ವವಿಖ್ಯಾತ ಮೈಸೂರು ದಸರಾ (Mysuru Dasara) ಅಕ್ಟೋಬರ್ 3ರಂದು ಉದ್ಘಾಟನೆಗೊಳ್ಳಲಿದ್ದು, ಅ. 12ರಂದು ಜಂಬೂಸವಾರಿ ನಡೆಯಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ದಸರಾ ಮಹೋತ್ಸವ ಸಂಬಂಧ ಸೋಮವಾರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಉನ್ನತ ಮಟ್ಟದ ಸಮಿತಿ ಸಭೆಯಲ್ಲಿ ಭಾಗವಹಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ಆದರೆ ಈ ಬಾರಿ ದಸರಾ ಅದ್ದೂರಿಯಾಗಿ ಆಚರಿಸಲು ತೀರ್ಮಾನಿಸಲಾಗಿದೆ.
ಕೊರೊನಾ ಬಂದಿದ್ದರಿಂದ ಕಳೆದ ಬಾರಿ ವಿಜೃಂಭಣೆಯಿಂದ ಆಚರಿಸಲಾಗಲಿಲ್ಲ, ಕಳೆದ ಬಾರಿ 30 ಕೋಟಿ ರೂ. ಆಗಿತ್ತು. ಈ ಬಾರಿ ಅದಕ್ಕಿಂತ ಹೆಚ್ಚು ಖರ್ಚು ಆಗಬಹುದು ಎಂದಿದ್ದಾರೆ ಎಂದರು. ದಸರಾ ಉದ್ಘಾಟನೆ ಯಾರಿಂದ ಮಾಡಿಸಬೇಕು ಎಂಬುವ ಸರ್ವಾನುಮತದಿಂದ ಅಧಿಕಾರವನ್ನು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ ಮಹದೇವಪ್ಪರಿಗೆ ನೀಡಲಾಗಿದೆ.