Breaking News

ಮುಡಾ’ ಹಗರಣ : ಸಿಎಂ ಸಿದ್ದರಾಮಯ್ಯ ವಿರುದ್ಧ ಮತ್ತೊಂದು ಖಾಸಗಿ ದೂರು

Spread the love

ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸದ್ಯಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಂಕಷ್ಟ ತಪ್ಪುವ ಹಾಗೆ ಕಾಣುತ್ತಿಲ್ಲ. ಇದೀಗ ಸಿಎಂ ಸಿದ್ದರಾಮಯ್ಯ ವಿರುದ್ಧ ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಟಿಜೆ ಅಬ್ರಹಾಂ ಅವರು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಖಾಸಗಿ ದೂರನ್ನು ಸಲ್ಲಿಸಿದ್ದಾರೆ.

 

ಹೌದು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಟಿಜೆ ಅಬ್ರಹಾಂ ಮತ್ತೊಂದು ಖಾಸಗಿ ದೂರು ಸಲ್ಲಿಸಿದ್ದಾರೆ. ಈಗಾಗಲೇ ಸ್ನೇಹಮಯಿ ಕೃಷ್ಣ ಎನ್ನುವವರು ಸಿಎಂ ಸಿದ್ದರಾಮಯ್ಯ ವಿರುದ್ಧ ಖಾಸಗಿದೂರು ಸಲ್ಲಿಸಿದ್ದಾರೆ. ನಾಳೆ ಖಾಸಗಿ ದೂರು ವಿಚಾರಣೆಗೆ ಸ್ವೀಕರಿಸುವ ಸಂಬಂಧ ನ್ಯಾಯಾಲಯವು ಆದೇಶ ನೀಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಹಾಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮುಡಾ ಹಗರಣ ಒಂದು ತೀವ್ರ ಸಂಕಷ್ಟಕ್ಕೆ ಸಿಲುಕಿಸಿದೆ. ಅಲ್ಲದೆ ಇತ್ತೀಚಿಗೆ ಬಿಜೆಪಿ ಮತ್ತು ಜೆಡಿಎಸ್ ಈ ಒಂದು ಹಗರಣವನ್ನು ಖಂಡಿಸಿ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂದು ಬೆಂಗಳೂರಿನಿಂದ ಮೈಸೂರಿನವರೆಗೆ ಮೈಸೂರು ಚಲೋ ಪಾದಯಾತ್ರೆ ಕೂಡ ಮಾಡಿತ್ತು. ಇದಕ್ಕೆ ಕೌಂಟರ್ ಕೊಡಲು ಕಾಂಗ್ರೆಸ್ ಸಹ ಜನಾಂದೋಲನ ಸಭೆಯನ್ನು ಸಹ ಮಾಡಿತ್ತು. ಇದೀಗ ಸಿಎಂ ಸಿದ್ದರಾಮಯ್ಯ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದ್ದು ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಟಿಜೆ ಅಬ್ರಹಾಂ ಮತ್ತೊಂದು ಖಾಸಗಿ ದೂರು ಸಲ್ಲಿಸಿದ್ದಾರೆ.


Spread the love

About Laxminews 24x7

Check Also

ಆರ್​ಟಿಒ ಅಧಿಕಾರಿಗಳಿಂದ 98 ಆಟೋಗಳು ಜಪ್ತಿ

Spread the loveಬೆಂಗಳೂರು: ನಿಗದಿ ಮಾಡಿದ್ದ ಪ್ರಯಾಣ ದರಕ್ಕಿಂತ ಹೆಚ್ಚು ಹಣ ವಸೂಲಿ ಮಾಡಿ ಕಾನೂನು ಬಾಹಿರವಾಗಿ ಆಟೋ ಚಾಲನೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ