Breaking News

ಸ್ವಾತಂತ್ರೋತ್ಸವ ಸಂಭ್ರಮ : ಕರ್ನಾಟಕದ ಇಬ್ಬರು ವಿದ್ಯಾರ್ಥಿಗಗಳಿಗೆ ಪ್ರಧಾನಿ ಆಹ್ವಾನ

Spread the love

ವದೆಹಲಿ,ಆ.13- ದೇಶದ 78ನೇಸ್ವಾತಂತ್ರೋತ್ಸವಕ್ಕೆ ಕ್ಷಣಗಣನೆ ಆರಂಭವಾಗಿರುವಂತೆ ಐತಿಹಾಸಿಕ ಕೆಂಪುಕೋಟೆಯಲ್ಲಿ ನಡೆಯುವ ಕಾರ್ಯಕ್ರಮಕ್ಕೆ ಕರ್ನಾಟಕದ ಇಬ್ಬರು ವಿದ್ಯಾರ್ಥಿಗಳನ್ನು ಪ್ರಧಾನಿ ಕಾರ್ಯಾಲಯ ಅತಿಥಿಗಳನ್ನಾಗಿ ಆಹ್ವಾನಿಸಿದೆ. ಕರ್ನಾಟಕದ ಗದಗ ಜಿಲ್ಲೆಯ ಸರ್ಕಾರಿ ಪದವಿಪೂರ್ವ ಕಾಲೇಜಿನ ಎನ್‌ಎಸ್‌‍ಎಸ್‌‍ ಘಟಕದ ವಿದ್ಯಾರ್ಥಿಗಳಾದ ಸತೀಶ್‌ ಕನ್ನೇರ್‌ ಹಾಗೂ ಆದಿತ್ಯ ಕೊರವರ ಅವರನ್ನು ಸ್ವಾತಂತ್ರ್ಯೋತ್ಸವದಲ್ಲಿ ಪಾಲ್ಗೊಳ್ಳಲು ಆಮಂತ್ರಣ ನೀಡಲಾಗಿದೆ.

ಸ್ವಾತಂತ್ರೋತ್ಸವ ಸಂಭ್ರಮ : ಕರ್ನಾಟಕದ ಇಬ್ಬರು ವಿದ್ಯಾರ್ಥಿಗಗಳಿಗೆ ಪ್ರಧಾನಿ ಆಹ್ವಾನ

ಕೇಂದ್ರ ಸರ್ಕಾರದ ಮೇರಿ ಮಾಟಿ, ಮೇರಾ ದೇಶ ಕಾರ್ಯಕ್ರಮವನ್ನು ಕಾಲೇಜಿನ ಎನ್‌ಎಸ್‌‍ಎಸ್‌‍ ಘಟಕ ಯಶಸ್ವಿ ಮಾಡುತ್ತ ಬಂದಿದೆ. ಅಮೃತ ವಾಟಿಕಾ ಕಾರ್ಯಕ್ರಮದಡಿ, 50 ಗಿಡಗಳನ್ನು ನೆಟ್ಟು ಸತೀಶ್‌ ಕನ್ನೇರ್‌ ಹಾಗೂ ಆದಿತ್ಯ ಕೊರವರ ಎಂಬ ವಿದ್ಯಾರ್ಥಿಗಳು ಪೋಷಿಸಿದ್ದಾರೆ. ಇದನ್ನು ಗಮನಿಸಿ ಪ್ರಧಾನಿ ಕಚೇರಿಯಿಂದ ವಿಶೇಷ ಅತಿಥಿಗಳಾಗಿ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮಕ್ಕೆ ಆಹ್ವಾನಿಸಲಾಗಿದೆ.

ಕಾಲೇಜಿನ ವತಿಯಿಂದ ಒಂದು ವರ್ಷದಿಂದ ಅಮೃತ ವಾಟಿಕಾ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ಮಾಡಿಕೊಂಡು ಬಂದಿದೆ. ಎನ್‌ಎಸ್‌‍ಎಸ್‌‍ ಘಟಕದಿಂದ ಕಾಲೇಜಿನ ಮುಂದೆ 50 ಗಿಡಗಳನ್ನು ನೆಟ್ಟು ಪಾಲನೆ ಪೋಷಣೆ ಮಾಡಲಾಗಿದೆ. ಆ ಗಿಡಗಳನ್ನು ಪೋಷಣೆ ಮಾಡುವುದನ್ನು ಕಾಲೇಜಿನ ವೆಬ್‌ಸೈಟ್‌ನಲ್ಲಿ ಅಪ್ರೋಡ್‌ ಮಾಡಲಾಗಿದೆ.

100 ವಿದ್ಯಾರ್ಥಿಗಳ ಪೈಕಿ ಸತೀಶ್‌ ಹಾಗೂ ಆದಿತ್ಯ ಎಂಬ ವಿದ್ಯಾರ್ಥಿಗಳು ಬಹಳ ಅಚ್ಚುಕಟ್ಟಾಗಿ ಗಿಡಗಳನ್ನು ಬೆಳೆಸಿದ್ದರು. ಇದನ್ನು ಗಮನಿಸಿ ಅವರಿಗೆ ಪ್ರಧಾನಿ ಕಚೇರಿಯಿಂದ ವಿಶೇಷ ಅತಿಥಿಗಳಾಗಿ ಆಹ್ವಾನ ನೀಡಲಾಗಿದೆ.


Spread the love

About Laxminews 24x7

Check Also

2 ವರ್ಷಗಳಿಂದ ಆರಂಭವಾಗದ ಶುದ್ಧ ನೀರಿನ ಘಟಕಗಳು

Spread the loveಹಾವೇರಿ: ನಗರದ ನಿವಾಸಿಗಳಿಗೆ ಶುದ್ಧ ಕುಡಿಯುವ ನೀರು ಸಿಗಲಿ ಎಂದು ಶಾಸಕರ ಅನುದಾನದಲ್ಲಿ ಆರು ಶುದ್ಧ ಕುಡಿಯುವ ನೀರಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ